ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಯಾವುದೇ ಕಾರಣಕ್ಕೂ ಸಿಬಿಐಗೆ ವಹಿಸಬಾರದೆಂದು ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈಗ ನಡೆಯುತ್ತಿರುವ ಎಸ್‌ಐಟಿ ತನಿಖೆ ಯನ್ನೇ ಮುಂದುವರಿಸಿ ಅದನ್ನು ಮತ್ತಷ್ಟು ಚುರುಕುಗೊಳಿಸುವಂತೆ ವಿನಂತಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಗೌರಿ ಲಂಕೇಶ್ ಅವರ ತಾಯಿ,ಗೌರಿ ಹತ್ಯೆಯ ಅನಂತರ ನಡೆದ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ವಿನಂತಿಸಿ, ನಮಗೆ ಸಿಬಿಐ ಮೇಲೆ ನಂಬಿಕೆ ಇಲ್ಲ. ಎಸ್‌ಐಟಿ ತನಿಖೆಯನ್ನೇ ಮುಂದುವರಿಸಿ ಎಂದು ಸಿಎಂಗೆ ಮನವಿ ಮಾಡಿದರು.
ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರಿ ಶೋಕದಲ್ಲಿರುವ ಇಂದಿರಾ ಲಂಕೇಶ್ ಅವರಿಗೆ ಧೈರ್ಯ ತುಂಬಿ, ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಇಂದಿರಾ ಲಂಕೇಶ್ ಭೇಟಿ ಅನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್‌ಐಟಿ ತನಿಖೆಯನ್ನೇ ಚುರುಕುಗೊಳಿಸುವಂತೆ ಮನವಿ ಮಾಡಿ ದ್ದಾರೆ. ಬೇರೆ ಯಾವುದೇ ತನಿಖೆ ಮಾಡು ವಂತೆ ಅವರು ಮನವಿ ಮಾಡಿಲ್ಲ. ಹತ್ಯೆ ಮಾಡಿದವರನ್ನು ಆದಷ್ಟು ಬೇಗ ಪತ್ತೆ ಹಚ್ಚುತ್ತೇವೆ ಎಂದು ಹೇಳಿದರು.
ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಅವರಿಗೆ ಘಟನೆಯ ಬಗ್ಗೆ ಎಲ್ಲ ಮಾಹಿತಿಯನ್ನು ನೀಡಿದ್ದೇನೆ. ಆದಷ್ಟು ಬೇಗ ಹಂತಕರನ್ನು ಪತ್ತೆ ಹಚ್ಚು
ವಂತೆ ಸೂಚನೆ ನೀಡಿದ್ದಾರೆ. ಆದಷ್ಟು ಬೇಗ ಪ್ರಕರಣ ವನ್ನು ಇತ್ಯರ್ಥ ಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದೇ ವೇಳೆ ಪುತ್ರಿ ಶೋಕದಲ್ಲಿರುವ ಇಂದಿರಾ ಲಂಕೇಶ್ ಅವರಿಗೆ ಧೈರ್ಯ ತುಂಬಿ, ಶೀಘ್ರ ಬಂಧಿಸುವುದಾಗಿ ಭರವಸೆ
ನೀಡಿದ್ದಾರೆ.