Advertisement

ಗೌರಿ ಹತ್ಯೆ: ಸುರೇಶ್‌ ಎಸ್‌ಐಟಿ ವಶಕ್ಕೆ

06:00 AM Aug 01, 2018 | Team Udayavani |

ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕುಣಿಗಲ್‌ ಮೂಲದ ಸುರೇಶ್‌ನನ್ನು 8 ದಿನಗಳ ಕಾಲ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ವಶಕ್ಕೆ ನೀಡಿ 3ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

Advertisement

ಪ್ರಕರಣದಲ್ಲಿ ಸುರೇಶ್‌ ಪ್ರಮುಖ ಪಾತ್ರವಹಿಸಿದ್ದು, ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಹೀಗಾಗಿ ಆರೋಪಿಯನ್ನು ವಶಕ್ಕೆ ಪಡೆಯುವಂತೆ ಎಸ್‌ಐಟಿ ಪರ ಸರ್ಕಾರಿ ವಿಶೇಷ ಅಭಿಯೋಜಕ ಶ್ರೀಶೈಲ ವಡವಡಗಿ ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಸಂಬಂಧ ಸೋಮವಾರವೇ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾ.ವಿ.ಪ್ರಕಾಶ್‌ ತೀರ್ಪನ್ನು ಮಂಗಳವಾರ ಪ್ರಕಟಿಸಿದರು. ಇದಕ್ಕೆ ಆಕ್ಷೇಪಿಸಿದ ಸುರೇಶ್‌ ಪರ ವಕೀಲ ಅಮೃತೇಶ್‌,
ತಮ್ಮ ಕಕ್ಷಿದಾರರಿಗೆ ತನಿಖಾಧಿಕಾರಿಗಳು ಬಹಳ ಹಿಂಸೆ ನೀಡಿದ್ದಾರೆ. ಹೀಗಾಗಿ 8 ದಿನಗಳ ಕಾಲ ಎಸ್‌ಐಟಿ ವಶಕ್ಕೆ ನೀಡಬಾರದು. ಮತ್ತೆ ಈತನ ಮೇಲೆ ಹಲ್ಲೆ ನಡೆಸುತ್ತಾರೆಂದು ವಾದಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಸರ್ಕಾರಿ ಅಭಿಯೋಜಕರು, ಆರೋಪಿ ಮೇಲೆ ತನಿಖಾಧಿಕಾರಿಗಳು ಹಲ್ಲೆ ನಡೆಸಿಲ್ಲ ಎಂಬುದಕ್ಕೆ ವೈದ್ಯರೇ ವರದಿ ನೀಡಿದ್ದಾರೆ. ವಶಕ್ಕೆ ಪಡೆದ ನಂತರವೂ ಹಲ್ಲೆ ನಡೆಸುವುದಿಲ್ಲ. ಅಲ್ಲದೆ, ಪ್ರಕರಣದಲ್ಲಿ ಆರೋಪಿ ಪಾತ್ರ ಮುಖ್ಯವಾಗಿದ್ದು, ಆರೋಪಿಗಳು ಕೃತ್ಯವೆಸಗುವ ಸಂದರ್ಭದಲ್ಲಿ ಬಳಸಿದ್ದ ಬಟ್ಟೆ, ಹೆಲ್ಮೆಟ್‌ ಹಾಗೂ ಇತರೆ ಪ್ರಮುಖ ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಅಲ್ಲದೆ, ಈತ ಕೃತ್ಯಕ್ಕೂ ಮೊದಲು ಸಭೆ
ನಡೆಸಿರುವ ಸ್ಥಳಗಳಾದ ಮಂಗಳೂರು, ವಿಜಯಪುರ, ಹುಬ್ಬಳ್ಳಿ ಹಾಗೂ ಸಾಕ್ಷ್ಯನಾಶ ಪಡಿಸಿದ ಸ್ಥಳಗಳಿಗೆ ಕರೆದೊಯ್ದು ಮಹಜರ್‌ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ವಶಕ್ಕೆ ನೀಡಬೇಕೆಂದು ಮನವಿ ಮಾಡಿದ್ದರು. ಹತ್ಯೆ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಲ್ಲದೆ, ಸಾಕ್ಷ್ಯನಾಶ ಪಡಿಸಿದ ಆರೋಪದ ಮೇಲೆ ಜು.25ರಂದು ಸುರೇಶ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next