Advertisement

ಗೌರಿ ಲಂಕೇಶ್ ಹತ್ಯೆ ಪ್ರಕರಣ; ಮಾಹಿತಿ ಕೇಳಿದ ಕೇಂದ್ರ ಸರ್ಕಾರ

02:13 PM Sep 06, 2017 | Sharanya Alva |

ನವದೆಹಲಿ: ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಸಚಿವಾಲಯ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದರು. ಪ್ರಕರಣದ ತನಿಖೆಗೆ ಕರ್ನಾಟಕ ಸರ್ಕಾರ ಎಸ್ಐಟಿ ತಂಡವನ್ನು ರಚಿಸಿದೆ.

ಏತನ್ಮಧ್ಯೆ ಕರ್ನಾಟಕದ ಕಾನೂನು ಸುವ್ಯವಸ್ಥೆ ಬೆಳವಣಿಗೆ ಹಿನ್ನೆಲೆಯಲ್ಲಿ ಗೌರಿ ಲಂಕೇಶ್ ಹತ್ಯೆಯ ವಿವರವನ್ನು ಕೇಂದ್ರ ಗೃಹ ಸಚಿವಾಲಯ ಕೇಳಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ಕರ್ನಾಟಕ ಸರ್ಕಾರದಿಂದ ವರದಿ ತರಿಸಿಕೊಳ್ಳುವಂತೆ ಗೃಹ ಕಾರ್ಯದರ್ಶಿ ರಾಜೀವ್ ಗೌಬಾಗೆ ಗೃಹ ಸಚಿವ ರಾಜನಾಥ್ ಸಿಂಗ್ ಸೂಚಿಸಿದ್ದಾರೆಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next