Advertisement

ಗೌರಿ ಲಂಕೇಶ್ ಹತ್ಯೆ ಕೇಸ್;  3 ಶಂಕಿತ ಹಂತಕರ ರೇಖಾಚಿತ್ರ ರಿಲೀಸ್

11:36 AM Oct 14, 2017 | Sharanya Alva |

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಶನಿವಾರ ಮೂವರು ಶಂಕಿತ ಹಂತಕರ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ.

Advertisement

ಎಸ್ಐಟಿ ಮುಖ್ಯಸ್ಥ ಬಿಕೆ ಸಿಂಗ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನಾವು ಈಗ ಶಂಕಿತರ ರೇಖಾಚಿತ್ರವನ್ನು ರೆಡಿ ಮಾಡಿದ್ದೇವೆ. ನಾವು ಎಲ್ಲಾ ಆಯಾಮಗಳಿಂದಲೂ ತನಿಖೆ ಮಾಡಿದ್ದೇವೆ. ಅಲ್ಲದೇ 250ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿರುವುದಾಗಿ ಹೇಳಿದರು.

ಗೌರಿ ಲಂಕೇಶ್ ಹತ್ಯೆಯಾಗಿ ಒಂದು ತಿಂಗಳು 10 ದಿನಗಳ ನಂತರ ಎಸ್ಐಟಿ ಅಧಿಕಾರಿಗಳು ಶಂಕಿತ ಹಂತಕರ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ. 7.65ಎಂಎಂ ಕಂಟ್ರಿ ಮೇಡ್ ಪಿಸ್ತೂಲ್ ನಿಂದ ಗೌರಿ ಲಂಕೇಶ್ ಅವರ ಹತ್ಯೆ ನಡೆಸಲಾಗಿದೆ. ಅಷ್ಟೇ ಅಲ್ಲ ಶಂಕಿತರ ಹಂತಕರು 7 ದಿನಗಳಿಂದ ಬೆಂಗಳೂರಿನಲ್ಲಿದ್ದ ಶಂಕೆ ಇದ್ದಿರುವುದಾಗಿ ತಿಳಿಸಿದರು.

ಸಿಸಿಟಿವಿಯಲ್ಲಿ ಹಂತಕರ ಚಿತ್ರ ಸೆರೆಯಾಗಿದೆ. ಸ್ಥಳೀಯರ ನೆರವು ಪಡೆದು ಶಂಕಿತರ ರೇಖಾಚಿತ್ರವನ್ನು ರಚಿಸಲಾಗಿದೆ. ನಾವು ನಮ್ಮ ತನಿಖೆಯನ್ನು ಮುಂದುವರಿಸಿರುವುದಾಗಿ ಬಿಕೆ ಸಿಂಗ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next