ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಜಯಕರ ಸುವರ್ಣ, ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವುದು ತೀವ್ರ ಖಂಡನೀಯ. ಇಂತಹ ಘಟನೆಗಳಿಂದ ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪತ್ರಿಕಾ ಬಂಧುಗಳಿಗೆ ಸರಕಾರ ರಕ್ಷಣೆ ನೀಡಬೇಕು. ಹತ್ಯೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯಲಿದೆ ಎಂದರು.
Advertisement
ವೈಚಾರಿಕ ಭಿನ್ನಾಭಿಪ್ರಾಯಗಳಿಗೆ ಸಾವೇ ಪರಿಹಾರವಲ್ಲ. ಹತ್ಯೆಯಿಂದ ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಹತ್ಯೆ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಸಂಘದ ಮಾಜಿ ಅಧ್ಯಕ್ಷ ಕಿರಣ್ ಮಂಜನಬೈಲು ಆಗ್ರಹಿಸಿದರು.