Advertisement

ಬಾಲಕಿಗೆ ಆ್ಯಸಿಡ್ ಎಸೆದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು: ಗಂಭೀರ್

09:49 AM Dec 15, 2022 | Team Udayavani |

ಹೊಸದಿಲ್ಲಿ: ಶಾಲೆಗೆ ಹೋಗುತ್ತಿದ್ದ 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿದ ವ್ಯಕ್ತಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕೆಂದು ಬಿಜೆಪಿ ಸಂಸದ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ.

Advertisement

ಇಂತಹ ಅಪರಾಧಗಳಲ್ಲಿ ಪಾಲ್ಗೊಳ್ಳುವವರಲ್ಲಿ ಭಯವನ್ನು ಹುಟ್ಟುಹಾಕುವ ಅಗತ್ಯವಿದೆ ಎಂದು ಮಾಜಿ ಕ್ರಿಕೆಟಿಗ, ರಾಜಕಾರಣಿ ಗಂಭೀರ್ ಹೇಳಿದ್ದಾರೆ.

ಪಶ್ಚಿಮ ದೆಹಲಿಯಲ್ಲಿ ಬೈಕ್‌ ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಬಾಲಕಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದರು. ಇದಾಗಿ ಗಂಟೆಗಳ ನಂತರ, ಆಕೆಯ ನೆರೆಹೊರೆಯವರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಗೆ ಶೇಕಡಾ ಎಂಟರಷ್ಟು ಸುಟ್ಟ ಗಾಯಗಳಾಗಿದ್ದು, ಸಫ್ದರ್‌ ಜಂಗ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ನಾಯಕತ್ವ ತೊರೆದ ನ್ಯೂಜಿಲ್ಯಾಂಡ್ ನ ಕೇನ್ ವಿಲಿಯಮ್ಸನ್: ನೂತನ ಕ್ಯಾಪ್ಟನ್ ನೇಮಕ

Advertisement

“ನಾವು ಈ ಪ್ರಾಣಿಗಳಲ್ಲಿ ಅಪಾರ ನೋವಿನ ಭಯವನ್ನು ಹುಟ್ಟುಹಾಕಬೇಕು. ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ಎಸೆದ ಹುಡುಗನನ್ನು ಅಧಿಕಾರಿಗಳು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು” ಎಂದು ಪೂರ್ವ ದೆಹಲಿಯ ಸಂಸದ ಗಂಭೀರ್ ಟ್ವೀಟ್ ಮಾಡಿದ್ದಾರೆ.

ದಾಳಿಯ ಮೇಲೆ ಆಕ್ರೋಶ ಹರಡುತ್ತಿದ್ದಂತೆ ಹಲವರು ನಿಷೇಧದ ಹೊರತಾಗಿಯೂ ಮಾರುಕಟ್ಟೆಯಲ್ಲಿ ಆ್ಯಸಿಡ್ ಲಭ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಮತ್ತು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಸೇರಿದಂತೆ ಮಹಿಳಾ ಗುಂಪುಗಳು ಮತ್ತು ಇತರರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next