ಚಂಡೀಗಡ : ಪಂಜಾಬ್ ಕಾಂಗ್ರೆಸ್‍ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ನವಜೋತ್ ಸಿಂಗ್ ಸಿಧು, ಸಚಿವೆ ರಜಿಯಾ ಸುಲ್ತಾನಾ ಹಾಗೂ ಯೋಗಿಂದರ್ ಧಿಂಗ್ರಾ ಅವರ ಬಳಿಕ ಗೌತಮ್ ಸೇಠ್ ಕೂಡ ರಾಜೀನಾಮೆ ನೀಡಿದ್ದಾರೆ.
ಪಂಜಾಬ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಗೌತಮ್ ಸೆಟ್ (ಉಸ್ತುವಾರಿ ತರಬೇತಿ) ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಂಗಳವಾರ ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರ ಬಳಿಕ ಸಚಿವೆ ರಜಿಯಾ ಸುಲ್ತಾನಾ ಹಾಗೂ ಪಂಜಾಬ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಯೋಗಿಂದರ್ ಧಿಂಗ್ರಾ ರಾಜೀನಾಮೆ ನೀಡಿದರು. ಇವರ ಬಳಿಕ ಗೌತಮ್ ಸೇಠ್ ಕೂಡ ರಾಜೀನಾಮೆ ನೀಡುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ.
Related Articles
ಕಳೆದ ಎರಡು ತಿಂಗಳ ಹಿಂದೆಯಷ್ಟೇ ಪಂಜಾಬ್ ಘಟಕದ ಕಾಂಗ್ರೆಸ್ ಅಧ್ಯಕ್ಷರಾಗಿ ಸಿಧು ಅಧಿಕಾರ ವಹಿಸಿಕೊಂಡಿದ್ದರು. ಆದರೆ, ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಜಿಯಾ ಕೂಡ ರಾಜೀನಾಮೆ ಹಾದಿ ತುಳಿದರು. ಸುಲ್ತಾನಾ ಅವರು ಸಿಧು ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಇವರ ಪತಿ, ಮಾಜಿ ಐಪಿಎಸ್ ಅಧಿಕಾರಿ, ಮೊಹಮ್ಮದ್ ಮುಸ್ತಫಾ, ಸಿದ್ದು ಅವರ ಪ್ರಮುಖ ಕಾರ್ಯತಂತ್ರದ ಸಲಹೆಗಾರರಾಗಿದ್ದಾರೆ.
ಇಂದು ಬೆಳಿಗ್ಗೆಯಷ್ಟೇ, ಸುಲ್ತಾನಾ ಅವರಿಗೆ ನೀರು ಸರಬರಾಜು ಮತ್ತು ನೈರ್ಮಲ್ಯ, ಸಾಮಾಜಿಕ ಭದ್ರತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮುದ್ರಣ ಮತ್ತು ಲೇಖನ ಇಲಾಖೆಗಳ ಜವಾಬ್ದಾರಿ ನೀಡಲಾಗಿತ್ತು. ಅಮರಿಂದರ್ ಸಿಂಗ್ ನೇತೃತ್ವದ ಸರ್ಕಾರದಲ್ಲಿ ಅವರು ಸಾರಿಗೆ ಸಚಿವರಾಗಿದ್ದರು.
ರಾಜೀನಾಮೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ರಜಿತಾ, ಸಿದು ಸಾಹಬ್ ಅವರು ತತ್ವಗಳಿಗೆ ಬೆಲೆ ಕೊಡುವ ಮನುಷ್ಯ. ಅವರು ಪಂಜಾಬ್ ಮತ್ತು ಪಂಜಾಬಿಯತ್‌ಗಾಗಿ ಹೋರಾಡುತ್ತಿದ್ದಾರೆ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಪಂಜಾಬ್‍ನ ಹಿತದೃಷ್ಠಿಯಿಂದ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ ರಜಿಯಾ.