Advertisement

ಗವಿಮಠ ಕೋವಿಡ್ ಆಸ್ಪತ್ರೆಗೆ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಭೇಟಿ ; ರೋಗಿಗಳ ಆರೋಗ್ಯ ವಿಚಾರಣೆ

12:36 PM May 21, 2021 | Team Udayavani |

ಕೊಪ್ಪಳ: ಗವಿಮಠ ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ. ಮಹೇಶ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿ, ರೋಗಿಗಳ ಆರೋಗ್ಯ ವಿಚಾರಿಸಿದರು.

Advertisement

ಜಿಲ್ಲಾಡಳಿತವು ಗವಿಮಠದ ಸಹಯೋಗದಲ್ಲಿ ಯಾತ್ರಿ ನಿವಾಸದಲ್ಲಿ 100 ಆಕ್ಸಿಜನ್ ಬೆಡ್ ಗಳ ಕೋವಿಡ್ ಆಸ್ಪತ್ರೆ ನಿರ್ಮಿಸಿದೆ. ಹಾಗೂ ಗವಿಮಠದ ವಸತಿ ನಿಲಯದಲ್ಲಿ ನಿರ್ಮಾಣಗೊಂಡ ಕೋವಿಡ್ ಕೇರ್ ಸೆಂಟರ್ ಅನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶನಿವಾರ ವೀಕ್ಷಣೆ ಮಾಡಿ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಕೋವಿಡ್ ಚಿಕಿತ್ಸೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದನ್ನೂಓದಿ: ಭೂಮಿ ಕಬಳಿಸಲು ಬೃಹತ್ ಬಂಡೆ ಸೀಳಿದ ಖದೀಮರು: ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ, ಪ್ರಾಧಿಕಾರ

ಈ ವೇಳೆ ಡಿಸಿ ವಿಕಾಸ್ ಕಿಶೋರ್ ಸುರಳ್ಕರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಡಿಹೆಚ್ ಒ ಡಾ. ಟಿ.ಲಿಂಗರಾಜು, ತಹಶೀಲ್ದಾರ್ ಅಮರೇಶ ಬಿರಾದಾರ್, ಜಿಲ್ಲಾ ಕ್ಷಯ ನಿರ್ಮೂಲನಾ ಅಧಿಕಾರಿ ಡಾ.ಮಹೇಶ್ ಎಂ.ಜಿ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next