Advertisement
ಬುಧವಾರ ಹರಿಹರ ತಾಲೂಕಿನ ಸಾರಥಿ, ಚಿಕ್ಕಬಿದರಿ, ಪಾಮೇನಹಳ್ಳಿ, ದೀಟೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಅವರು, ಹರಿಹರ ತಾಲೂಕಿನಲ್ಲಿ ಸಚಿವರ ಅಕ್ರಮ ಮರಗಳುಗಾರಿಕೆ ಬಗ್ಗೆ ಶಾಸಕರಾದ ಬಿ.ಪಿ. ಹರೀಶ್ ಅವರು ಧ್ವನಿ ಎತ್ತಿದ್ದಾರೆ. ಇದಕ್ಕಾಗಿ ಸಚಿವರ ಹಿಂಬಾಲಕರು ಶಾಸಕರಿಗೇ ಜೀವ ಬೆದರಿಕೆ ಹಾಕಿದ್ದಾರೆ ಎಂದರೆ ಇನ್ನು ಸಾಮಾನ್ಯ ಜನರ ಪರಿಸ್ಥಿತಿ ಏನು ನೀವೇ ಯೋಚನೆ ಮಾಡಿ. ಇಂತಹವರಿಗೆ ಅಧಿಕಾರ ಕೊಟ್ಟರೆ ನಮ್ಮ-ನಿಮ್ಮ ಬದುಕು ದುಸ್ಥರವಾಗತ್ತೆ. ಅಭಿವೃದ್ಧಿಯೋ, ಅಕ್ರಮವೋ ಎಂಬುದನ್ನು ಜನರೇ ಯೋಚಿಸಬೇಕು. ಈಗ ಚುನಾವಣೆ ಬಂದಿದ್ದು ಜಿಲ್ಲಾ ಉಸ್ತುವಾರಿ ಸಚಿವರು, ಅವರ ಪತ್ನಿ ಇಬ್ಬರೂ ಈಗ ಅಭಿವೃದ್ಧಿ ಜಪ ಮಾಡುತ್ತಿದ್ದಾರೆ. ಅಂತಹವರಿಗೆ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದರು.
ಮಾಡಬೇಕು ಎಂದು ಕರೆ ನೀಡಿದರು.
Related Articles
Advertisement
ಶಾಸಕ ಬಿ.ಪಿ.ಹರೀಶ್ ಮಾತನಾಡಿ, ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹರಿಹರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ. ದಾವಣಗೆರೆಯಿಂದ ಕೂಗಳತೆ ದೂರದಲ್ಲಿರುವ ಹರಿಹರಕ್ಕೆ ವರ್ಷದಲ್ಲಿ ಎಷ್ಟು ಬಾರಿ ಭೇಟಿ ಕೊಟ್ಟಿದ್ದಾರೆ. ಅವರ ಹಿಂಬಾಲಕರನ್ನು ಬಿಟ್ಟು ಅಕ್ರಮ ಮರಳುಗಾರಿಕೆ ಮಾಡಿರುವುದು ಬಿಟ್ಟರೆ ಹರಿಹರಕ್ಕೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕಾಂಗ್ರೆಸ್ ಗೂಂಡಾ ವರ್ತನೆ ಬಗ್ಗೆ ಮಾಹಿತಿ ನೀಡಿ, ನಮ್ಮ ಅಭಿವೃದ್ಧಿ ಕೆಲಸಗಳ ವಿವರ ನೀಡಿ ಗಾಯಿತ್ರಿ ಪರ ಮತಯಾಚಿಸಬೇಕು ಎಂದು ಮನವಿ ಮಾಡಿದರು.
ಎಥೆನಾಲ್ ಘಟಕ ನಿರ್ಮಾಣಕ್ಕೆ ಕ್ರಮಕರ್ನಾಟಕ ನೀರಾವರಿ ನಿಗಮ ಕಚೇರಿಯನ್ನು ದಾವಣಗೆರೆಗೆ ಸ್ಥಳಾಂತರ ಮಾಡಿಸಲಾಗುವುದು. ನೀರಾವರಿ ನಿಗಮ ದಾವಣಗೆರೆಗೆ ಬಂದರೆ ಕಾಡಾ ಸಭೆಗಳನ್ನು ನಡೆಸಬಹುದು. ಕೊನೆ ಭಾಗದ ಗ್ರಾಮಗಳಿಗೆ ಭದ್ರಾ ನಾಲೆ ನೀರು ಸಮರ್ಪಕವಾಗಿ ಹರಿಸಲು ಸಾಧ್ಯವಾಗುತ್ತದೆ. ಹರಿಹರ ತಾಲೂಕಿನ ಹನಗವಾಡಿ ಬಳಿ 60 ಕೆಎಲ್ಪಿಡಿ ಸಾಮರ್ಥಯದ 960 ಕೋಟಿ ವೆಚ್ಚದ 2 ಜಿ ಎಥೆನಾಲ್ ಘಟಕವನ್ನು ಎಂ.ಆರ್.ಪಿ.ಎಲ್ ಅವರು ನಿರ್ಮಾಣ ಮಾಡಲು ಸಿದ್ಧತೆ ನಡೆಸಿದ್ದಾರೆ. ಮೊದಲ ಆದ್ಯತೆ ಮೇರೆಗೆ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುತ್ತೇನೆ ಎಂದು ಗಾಯಿತ್ರಿ ಸಿದ್ದೇಶ್ವರ್ ತಿಳಿಸಿದರು.