Advertisement

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

09:47 AM Apr 27, 2024 | Team Udayavani |

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ. ಸರ್ಕಾರಿ ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ ಪ್ರಾರಂಭಕ್ಕೆ ಒತ್ತು ನೀಡಲಾಗುವುದು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌ ತಿಳಿಸಿದರು.

Advertisement

ಶುಕ್ರವಾರ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಆನಗೋಡು, ಬಾಡಾ, ಮಾಯಕೊಂಡ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿ  ಮಾತನಾಡಿದ ಅವರು, ಮಾಯಕೊಂಡ ಯಾವಾಗಲೂ ಬಿಜೆಪಿ ಪರ ಅಲೆ ಇರುವಂತಹ ಕ್ಷೇತ್ರ. ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌, ಬಸವರಾಜ್‌ ನಾಯ್ಕ, ಪ್ರೊ| ಎನ್‌.ಲಿಂಗಣ್ಣ
ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ.

ಈಗಿನ ಕಾಂಗ್ರೆಸ್‌ ಶಾಸಕರು, ಸಚಿವರು ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಒಂದೇ ಒಂದೂ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಕಾಂಗ್ರೆಸ್‌ ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಶೂನ್ಯ ರಾಜ್ಯ ಮಾಡಲು ಹೊರಟಿದೆ ಎಂದು ವಾಗ್ಧಾಳಿ ನಡೆಸಿದರು.

ಮಾಜಿ ಶಾಸಕ ಪ್ರೊ| ಎನ್‌.ಲಿಂಗಣ್ಣ ಮಾತನಾಡಿ, ಸಂಸದ ಸಿದ್ದೇಶ್ವರ ಅವರು ಮಾಯಕೊಂಡ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ಗಾಯಿತ್ರಿ ಸಿದ್ದೇಶ್ವರ್‌ ಅವರನ್ನು ಗೆಲ್ಲಿಸಿ ಕಳುಹಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಮಾಜಿ ಶಾಸಕ ಬಸವರಾಜ ನಾಯ್ಕ ಮಾತನಾಡಿ, ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿ ಆಗಬೇಕು ಎಂದು ಇಡೀ ವಿಶ್ವವೇ ಎದುರು ನೋಡುತ್ತಿದೆ ಎಂದರು.
ಮುಖಂಡರಾದ ಅಣಬೇರು ಜೀವನಮೂರ್ತಿ, ಜಿ.ಎಸ್‌. ಶ್ಯಾಮ್‌, ದೇವೇಂದ್ರಪ್ಪ, ಹನುಮಂತನಾಯ್ಕ, ಆನಂದಪ್ಪ. ಮಂಜನಾಯ್ಕ, ಗಂಗಾ ನಾಯ್ಕ, ಗ್ಯಾರಳ್ಳಿ
ಶಿವಕುಮಾರ್‌, ಹನುಮಂತಪ್ಪ, ಮಂಡಲ ಸದಸ್ಯರು, ಗ್ರಾಪಂ ಸದಸ್ಯರು, ಬೂತ್‌ ಮಟ್ಟದ ಅಧ್ಯಕ್ಷರು, ಬಿಜೆಪಿ ಮುಖಂಡರು ಇದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ ಪ್ರಧಾನಿ ಮೋದಿ ಸದಾ ನಾರಿ ಶಕ್ತಿಯ ಬೆನ್ನಿಗೆ ನಿಂತಿದ್ದಾರೆ. ಮೋದಿ ಅವರು ಶಿವಮೊಗ್ಗಕ್ಕೆ ಬಂದಾಗಲೂ ಸಹೋದರಿ ಗಾಯಿತ್ರಿ ಸಿದ್ದೇಶ್ವರ್‌ ಅವರನ್ನು ಗೆಲ್ಲಿಸಿ ದೆಹಲಿ ಕಳುಹಿಸಿ ಎಂದಿದ್ದರು. ಈಗ ಮತ್ತೂಮ್ಮೆ ಏ.28 ರಂದು ದಾವಣಗೆರೆಗೆ ಬಂದು ಮತಯಾಚಿಸುತ್ತಿದ್ದಾರೆ ಎಂದರೆ ಅದು ನನ್ನ ಸೌಭಾಗ್ಯ. ಅವರು ಕೇವಲ ಬಾಯಿ ಮಾತಿನಲ್ಲಿ ನಾರಿ ಶಕ್ತಿ ಬಗ್ಗೆ ಹೇಳಿಲ್ಲ. ನನ್ನಂತಹ ನಾರಿಯ ಪರ ಖುದ್ದು ಬಂದು ಮತಯಾಚಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು ಎಂಬುದನ್ನು ತೋರಿಸಬೇಕು ಎಂದು ಗಾಯಿತ್ರಿ ಸಿದ್ದೇಶ್ವರ ಮನವಿ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next