Advertisement

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

10:03 AM Apr 18, 2024 | Team Udayavani |

ಹೊನ್ನಾಳಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಾನವಾದ ನಾಯಕನಾಗಲೀ, ನಾಯಕತ್ವವಾಗಲೀ ಕಾಂಗ್ರೆಸ್‌ನಲ್ಲಿ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಗಳಿಗೆ ಮತ ಚಲಾಯಿಸಿ ಜಯಶೀಲರನ್ನಾಗಿಸಿದರೆ ಮತ್ತೂಮ್ಮೆ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಲಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹೇಳಿದರು.

Advertisement

ಬುಧವಾರ ತಾಲೂಕಿನ ಕುಂದೂರು ಗ್ರಾಮದಲ್ಲಿ ಮತಯಾತನೆ ಮಾಡಿ ಮಾತನಾಡಿದ ಅವರು, ಒಬ್ಬ ಸಂಸದ ತನ್ನ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ಗ್ರಾಮೀಣ ಜನತೆಯ ಸಮಸ್ಯೆಗಳನ್ನು ಆಲಿಸಿ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ ಕೊಡಬಹುದು ಎಂಬುದನ್ನು ದಾವಣಗೆರೆ ಕ್ಷೇತ್ರದಲ್ಲಿ ತೋರಿಸಿ ಕೊಟ್ಟವರು ನನ್ನ ಮಾವನವರಾದ ಮಾಜಿ ಸಂಸದ ಜಿ. ಮಲ್ಲಿಕಾರ್ಜಪ್ಪನವರು. ನಂತರ ಅವರ ಪುತ್ರ, ನನ್ನ ಪತಿ ಜಿ.ಎಂ. ಸಿದ್ದೇಶ್ವರ ಅವರು ಕೂಡ ತಮ್ಮ ತಂದೆಯ ಮಾರ್ಗದಲ್ಲಿ ಸಾಗಿದ್ದಾರೆ. ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ. ಈಗ ಪಕ್ಷ ನನಗೆ ಟಿಕೆಟ್‌ ನೀಡಿದ್ದು, ಕೂಡ ಸಂಸದೆಯಾಗಿ ಆಯ್ಕೆಯಾದರೆ ಜನರ ಜೊತೆಗಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು.

ಹೊನ್ನಾಳಿ ಕ್ಷೇತ್ರದ ಜನತೆ ಆಶೀರ್ವದಿಸಿದರೆ ಮುಂದಿನ ದಿನಗಳಲ್ಲಿ ಹೊನ್ನಾಳಿಯಲ್ಲಿ ಸಂಸದರ ಜನಸಂಪರ್ಕ ಕಚೇರಿ ಆರಂಭಿಸಲಾಗುವುದು. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡಲಾಗುವುದು. ನೀವು ನೀಡುವ ಒಂದೊಂದು ಮತವೂ ದೇಶದ ಬದಲಾವಣೆ, ರಕ್ಷಣೆ, ಸುಭದ್ರತೆಗೆ ಅಡಿಪಾಯವಾಗುತ್ತದೆ. ಮಹಿಳಾ ಸಬಲೀಕರಣ, ಯುವಶಕ್ತಿ ಬಲಪಡಿಸಲು ಮತ್ತೂಮ್ಮೆ ಮೋದಿ ಪ್ರಧಾನಿ ಅಗಬೇಕೆಂಬುದು ಜನರ ಸಂಕಲ್ಪ. ಆದ್ದರಿಂದ ಬಿಜೆಪಿ ಗೆಲ್ಲಿಸಬೇಕೆಂದು ಮನವಿ ಮಾಡಿದರು. ತಾಲೂಕಿನ ಬನ್ನಿಕೋಡು, ಮುಕ್ತೇನಹಳ್ಳಿ, ಕೂಲಂಬಿ, ಕುಂಬಳೂರು, ಕುಂದೂರು, ಯಕ್ಕನಹಳ್ಳಿ, ತಿಮ್ಲಾಪುರ, ಬೀರಗೊಂಡನಹಳ್ಳಿ, ತರಗನಹಳ್ಳಿ ಬೆನಕನಹಳ್ಳಿ ರಾಂಪುರ, ಲಿಂಗಾಪುರ,ಹೊಸಹಳ್ಳಿ, ಸಾಸ್ವೇಹಳ್ಳಿ, ಕಮ್ಮಾರಗಟ್ಟೆ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ಮತಯಾಚನೆ ಮಾಡಲಾಯಿತು.

ತಾಲೂಕು ಮಂಡಲ ಅಧ್ಯಕ್ಪ ಜೆ.ಕೆ. ಸುರೇಶ್, ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಕುಬೇಂದ್ರಪ್ಪ, ಸುರೇಂದ್ರ ನಾಯ್ಕ, ಮಾರುತಿ ನಾಯ್ಕ, ಅನಿತ್, ಮಂಜುನಾಥ ನೆಲಹೊನ್ನೆ ಸೇರಿದಂತೆ ಅಯಾ ಗ್ರಾಮಗಳ ಮುಖಂಡರು, ಕಾರ್ಯಕರ್ತರು ಇದ್ದರು.

ಬಿಜೆಪಿ ಗೆಲುವು ಎಲ್ಲರ ಗುರಿ
ಸಂಸದ ಜಿ.ಎಂ. ಸಿದ್ದೇಶ್ವರ ಅವರು ನನಗೆ ಸಹೋದರ ಇದ್ದಂತೆ. ಪ್ರಸ್ತುತ ಅವರ ಪತ್ನಿ, ಸಹೋದರಿ ಗಾಯಿತ್ರಿ ಸಿದ್ದೇಶ್ವರ ಅವರು ಬಿಜೆಪಿ ಅಭ್ಯರ್ಥಿಯಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರನ್ನು ಗೆಲ್ಲಿಸುವುದು ಇಡೀ ಜಿಲ್ಲೆಯ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಗುರಿಯಾಗಿದೆ. ನರೇಂದ್ರ ಮೋದಿಯವರು ಮತ್ತೆ ದೇಶದ ಪ್ರಧಾನಿಯಾಗಬೇಕೆಂಬುದು ಜನರ ಅಪೇಕ್ಷೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

Advertisement

ಇದನ್ನೂ ಓದಿ: ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Advertisement

Udayavani is now on Telegram. Click here to join our channel and stay updated with the latest news.

Next