ಲಕ್ನೋ: ಮಹಿಳೆ ಮತ್ತು ಆಕೆಯ ಅಪ್ರಾಪ್ತ ಪುತ್ರಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಉತ್ತರಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮತ್ತು ಇತರ ಇಬ್ಬರಿಗೆ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ:ಅಪ್ಪು ಭಾವಚಿತ್ರದ ಎದುರು ಶಾಂಪೇನ್ :’ಏಕ್ ಲವ್ ಯಾ’ತಂಡದ ವಿರುದ್ಧ ಸಾ.ರಾ.ಗೋವಿಂದು ಕಿಡಿ
ಅತ್ಯಾಚಾರ ಪ್ರಕರಣದ ಶಿಕ್ಷೆಯ ಘೋಷಿಸುವ ವೇಳೆ ಪ್ರಜಾಪತಿ ಹಾಗೂ ಇಬ್ಬರು ಆರೋಪಿಗಳಾದ ಅಶೋಕ್ ತಿವಾರಿ, ಆಶೀಷ್ ಶುಕ್ಲಾ ಕೋರ್ಟ್ ನಲ್ಲಿ ಹಾಜರಿದ್ದಿರುವುದಾಗಿ ವರದಿ ತಿಳಿಸಿದೆ.
ಉತ್ತರಪ್ರದೇಶದ ಹಿಂದಿನ ಅಖಿಲೇಶ್ ಯಾದವ್ ಸರ್ಕಾರದಲ್ಲಿ ಸಚಿವನಾಗಿದ್ದ ಪ್ರಜಾಪತಿಯನ್ನು ಬುಧವಾರ ಬಂಧಿಸಲಾಗಿತ್ತು. ಮಹಿಳೆ ಮತ್ತು ಆಕೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಪ್ರಜಾಪತಿ ಹಾಗೂ ಇಬ್ಬರನ್ನು ಕೋರ್ಟ್ ದೋಷಿ ಎಂದು ತೀರ್ಪು ನೀಡಿತ್ತು.
ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮೂವರ ವಿರುದ್ಧವೂ ಆರೋಪ ಸಾಬೀತು ಮಾಡುವಷ್ಟು ಪುರಾವೆಗಳು ಇದ್ದಿರುವುದಾಗಿ ಪ್ರಾಸಿಕ್ಯೂಷನ್ ಪ್ರಕರಣದ ವಿಚಾರಣೆ ವೇಳೆ ಕೋರ್ಟ್ ಗೆ ತಿಳಿಸಿತ್ತು. ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್ 376 (ಡಿ) ಅನ್ವಯ ಮೂವರನ್ನು ಅತ್ಯಾಚಾರ ಆರೋಪದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿತ್ತು.