Advertisement

Lok Sabha Election: “ಕೈಗಾರಿಕಾ ಕಾರಿಡಾರ್‌ ನಿರ್ಮಾಣದ ಮಹದಾಸೆ’: ಗಾಯತ್ರಿ ಸಿದ್ದೇಶ್ವರ

10:22 AM Apr 05, 2024 | Team Udayavani |

ದಾವಣಗೆರೆ: ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್‌ ಕಾರಿಡಾರ್‌ ನಿರ್ಮಾಣ ಮಾಡಬೇಕು ಎನ್ನುವುದು ನಮ್ಮ ಮಹದಾಸೆ ಎಂದು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌
ತಿಳಿಸಿದರು.

Advertisement

ಗುರುವಾರ ವಿನಾಯಕ ಬಡಾವಣೆಯ ವಿನಾಯಕ ಉದ್ಯಾನವನದಲ್ಲಿ ವಿನೂತ ಮಹಿಳಾ ಸಮಾಜದ ಮಾಸಿಕ ಸಭೆಯಲ್ಲಿ ಮಹಿಳಾ ಮತದಾರರ ಜೊತೆ
ಮಾತನಾಡಿದ ಅವರು, ದಾವಣಗೆರೆ ಜಿಲ್ಲೆ ಮಧ್ಯ ಕರ್ನಾಟಕದಲ್ಲಿದ್ದು ಅಕ್ಕಪಕ್ಕದ ಎರಡು ಮೂರು ಜಿಲ್ಲೆಗಳು ಆರೋಗ್ಯ, ಶಿಕ್ಷಣ, ಕೈಗಾರಿಕೆ ವಿಚಾರದಲ್ಲಿ ಜಿಲ್ಲೆಯನ್ನೇ ಆಶ್ರಯಿಸಿದ್ದಾವೆ. ಹಾಗಾಗಿ ದಾವಣಗೆರೆ ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್‌ ಕಾರಿಡಾರ್‌ ನಿರ್ಮಾಣ ಮಾಡಬೇಕು ಎನ್ನುವುದು ನಮ್ಮ ಮಹದಾಸೆ ಎಂದರು.

ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರು ಜಿಲ್ಲೆಯಲ್ಲಿ 1ಸಾವಿರಕ್ಕೂ ಹೆಚ್ಚು ಎಕರೆ ಜಮೀನನ್ನು ಇಂಡಸ್ಟ್ರಿಯಲ್‌ ಕಾರಿಡಾರ್‌ ನಿರ್ಮಾಣಕ್ಕೆ ಸ್ಥಳ ಗುರುತಿಸಿದ್ದರು. ಮುಂದಿನ ದಿನಗಳಲ್ಲಿ ಅದನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸುವುದೇ ನನ್ನ ಪ್ರಥಮ ಆದ್ಯತೆ ಎಂದು ತಿಳಿಸಿದರು.

ಕರ್ನಾಟಕದ ಮಧ್ಯ ಭಾಗದಲ್ಲಿರುವ ದಾವಣಗೆರೆ ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್‌ ಕಾರಿಡಾರ್‌ ನಿರ್ಮಾಣ ಮಾಡಿದರೆ ಲಕ್ಷಾಂತರ ಉದ್ಯೋಗಗಳು ದೊರೆಯುವಂತಾಗುತ್ತದೆ.

ಸಂಸದರಾದ ಜಿ.ಎಂ.ಸಿದ್ದೇಶ್ವರ್‌ ಅವರು ಜಮೀನನ್ನು ಗುರುತಿಸಿದ್ದರು. ಭೂಸ್ವಾಧೀನ ಮಾಡಿಕೊಳ್ಳುವ ಪ್ರಸ್ತಾವನೆ ಹಂತಕ್ಕೆ ಬಂದು ನಿಂತಿದೆ. ವಿಮಾನ ನಿಲ್ದಾಣಕ್ಕೂ 361 ಎಕರೆ ಜಾಗ ಗುರುತಿಸಲಾಗಿದ್ದು, ಭೂಸ್ವಾಧೀನಕ್ಕೆ 142 ಕೋಟಿ ರೂ. ಅವಶ್ಯಕತೆ ಇದೆ. ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಮಹಿಳೆಯರೆಲ್ಲರೂ ಸೇರಿ ಕಮಲದ ಗುರುತಿಗೆ ಮತ ನೀಡಿದರೆ ಮುಂದಿನ ದಿನಗಳಲ್ಲಿ ಈ ಎರಡು ಬೃಹತ್‌ ಯೋಜನೆಗಳನ್ನು ಪ್ರಥಮಾದ್ಯತೆ ಮೇಲೆ ಪೂರ್ತಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

Advertisement

ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಡ್ರೋಣ್‌ ನಿರ್ವಹಣೆ ತರಬೇತಿ ಕೊಡಿಸುತ್ತಿದ್ದಾರೆ. ಡ್ರೋಣ್‌ ಮೂಲಕ ಔಷಧ ಸಿಂಪಡಣೆ ಮಾಡುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಲು ಸಹಕಾರಿಯಾಗಲಿದೆ.
ಉದ್ಯೋಗ ಲಭಿಸಲು ಅನುಕೂಲವಾಗಿದೆ ಎಂದು ತಿಳಿಸಿದರು.

ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲರೂ ನೆಮ್ಮದಿಯಿಂದ ನಿದ್ರೆ ಮಾಡುತ್ತಿದ್ದೇವೆ. ದೇಶದ ಆಂತರಿಕ, ಬಾಹ್ಯ ಭದ್ರತೆ ಬಗ್ಗೆ
ಅವರಿಗಿರುವಷ್ಟು ಕಾಳಜಿ ಕಾಂಗ್ರೆಸ್ಸಿಗರಿಗೆ ಇಲ್ಲ. ಹಿಂದುಗಳ ಆರಾಧ್ಯ ದೈವ, ಮರ್ಯಾದ ಪುರುಷೋತ್ತಮನಿಗೆ ದೇವಸ್ಥಾನ ಕಟ್ಟಲು 500 ವರ್ಷವಾದರೂ
ಆಗಿರಲಿಲ್ಲ. ಮೋದಿ ಅವರು ಕೇವಲ 2 ವರ್ಷದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿ ಕೋಟ್ಯಂತರ ಹಿಂದುಗಳ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದ್ಧಾರೆ.

ರಾಮ ಮಂದಿರ ಹೋರಾಟದಲ್ಲಿ ದಾವಣಗೆರೆಯ ವೀರರು ಹುತಾತ್ಮರಾಗಿದ್ದು ನಮ್ಮ ಕಣ್ಮುಂದೆಯೇ ಇದೆ. ನಾವು ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡಬೇಕು ಎಂದರೆ ಕಮಲದ ಗುರುತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಬೇಕು ಎಂದು ಮನವಿ ಮಾಡಿದರು.

ಸಣ್ಣ ಮಕ್ಕಳನ್ನು ಕೇಳಿದರೂ ಮೋದಿ, ಮೋದಿ ಎನ್ನುತ್ತಾರೆ. ಅದಕ್ಕೆ ಕಾರಣ ಅವರ ಪಾರದರ್ಶಕ ಆಡಳಿತ. ಈ ಬಾರಿಯ ಚುನಾವಣೆಯಲ್ಲಿ ನೀವೆಲ್ಲ ನನಗೆ ಮತ
ನೀಡಿ, ಗೆಲ್ಲಿಸಿ ದೆಹಲಿಗೆ ಕಳುಹಿಸುವ ಮೂಲಕ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಪ್ರಾರ್ಥಿಸಿದರು.

ನಗರಪಾಲಿಕೆ ಸದಸ್ಯೆ ವೀಣಾ ನಂಜಪ್ಪ, ಸಮಾಜದ ಅಧ್ಯಕ್ಷರಾದ ರೇಖಾ ಓಂಕಾರಪ್ಪ, ಶೈಲಜಾ, ರಂಚಿತ, ಚೈತನ್ಯ, ರೂಪಾ, ವಿನೋದಾ, ವಾಣಿ ಮತ್ತಿರರು
ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next