Advertisement
ಶಾಮನೂರಿನ ಆಂಜನೇಯಸ್ವಾಮಿ ಹಾಗೂ ಈಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಮುಖಂಡರ ಮನೆಗಳಿಗೆ ತೆರಳಿ ಉಭಯ ಕುಶಲೋಪರಿ ವಿಚಾರಿಸಿದರು. ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿದ ಗಾಯತ್ರಿ ಸಿದ್ದೇಶ್ವರ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಪುಣ್ಯಾನಂದಪುರಿ ಸ್ವಾಮೀಜಿ ಅವರ ಗದ್ದಿಗೆಗೆ ನಮನ ಸಲ್ಲಿಸಿದರು. ಬಳಿಕ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು. ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ಹನಗವಾಡಿ ವೀರೇಶ್, ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಮುಖಂಡ ಜಿ.ಎಸ್. ಅನಿತ್‌ಕುಮಾರ್, ಬಿ.ಎಸ್. ಜಗದೀಶ್ ಇತರರು ಇದ್ದರು.
Related Articles
Advertisement
ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ಆಂಜನೇಯಸ್ವಾಮಿ ದೇವಾಲಯ, ಹಳ್ಳಿಹಾಳ್ ಗ್ರಾಮದ ಬಸವೇಶ್ವರ ಸ್ವಾಮಿ ದೇವಾಲಯ, ಜಿ.ಬೇವಿನಹಳ್ಳಿ ಗ್ರಾಮದ ಮಂಜುನಾಥ ಸ್ವಾಮಿ, ಗಣೇಶ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನ ಹಾಗೂ ಮಠಗಳ ಭೇಟಿ ನಂತರ ಆಯಾ ಗ್ರಾಮದ ಮುಖಂಡರ ಮನೆಗಳಿಗೆ ತೆರಳಿ ಮತಯಾಚನೆ ಮಾಡಿ, ಕೇಂದ್ರ ಸರ್ಕಾರದ ಮತ್ತು ಜಿ.ಎಂ. ಸಿದ್ದೇಶ್ವರ ಅವರು, ಕಳೆದ ನಾಲ್ಕು ಅವಧಿಯಲ್ಲಿ ಮಾಡಿವಂತಹ ಅಭಿವೃದ್ಧಿ ಕೆಲಸ-ಕಾರ್ಯ, ಗ್ರಾಮಗಳ ಭೇಟಿ ನೀಡಿದ್ದಾರೆ. ಅವರಂತೆ ತಮಗೂ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. ಹರಿಹರ ತಾಲೂಕಿನ ಗೋವಿನಹಾಳ್, ಮೂಗಿನಗುಂದಿ, ಹಿಂಡಸಘಟ್ಟ, ಕೊಕ್ಕನೂರು, ಹಳ್ಳಿಹಾಳ್, ಜಿ.ಬೇವಿನಹಳ್ಳಿ, ಜಗಳಿ ಗ್ರಾಮಗಳಿಗೆ ಭೇಟಿ ನೀಡಿ ಸಾವಿರಾರು ಕಾರ್ಯಕರ್ತರು, ಮುಖಂಡರನ್ನು ಭೇಟಿ ಮಾಡಿ ಚುನಾವಣೆ ಬಗ್ಗೆ ಚರ್ಚಿಸಿದರು. ಎಲ್ಲೆಡೆ ಗಾಯತ್ರಿ ಸಿದ್ದೇಶ್ವರ ಅವರಿಗೆ ಪ್ರೀತಿಪೂರ್ವಕ ಸ್ವಾಗತ ದೊರೆಯಿತು.
ಜೆಡಿಎಸ್ ಮುಖಂಡರ ವಿಶ್ವಾಸ ಗಳಿಸಲು ಯತ್ನಪ್ರವಾಸದುದ್ದಕ್ಕೂ ಬಿಜೆಪಿ ಜೊತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರನ್ನು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಭೇಟಿಯಾದರು. ಹಿಂಡಸಘಟ್ಟ ಗ್ರಾಮದ ಜೆಡಿಎಸ್ ಮುಖಂಡ ಮುರುಗೇಶಪ್ಪ ಅವರ ಮನೆಗೆ ಭೇಟಿ ನೀಡಿ, ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಗೆ
ಹೋಗುತ್ತಿದ್ದೇವೆ. ದೇಶದ ಅಭಿವೃದ್ಧಿ, ಮೋದಿ ಅವರ ಆಡಳಿತಕ್ಕೆ ಜೆಡಿಎಸ್ ವರಿಷ್ಠರು ಮೆಚ್ಚಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ದಾವಣಗೆರೆಯಲ್ಲೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ನಮ್ಮನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡಬೇಕೆಂಬ ಉದ್ದೇಶದಿಂದ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜೊತೆ ಸೀಟು ಹೊಂದಾಣಿಕೆ ಮಾಡಿಕೊಂಡಿದೆ. ನಾವು ಒಂದಾಗಿ ಚುನಾವಣೆ ಎದುರಿಸಿದರೆ ರಾಜ್ಯದ 28ಕ್ಕೆ 28 ಸ್ಥಾನಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.