Advertisement

GDP ದೇಶಕ್ಕೆ ಕರ್ನಾಟಕ ನಂ.1: ಸಿಎಂ ಸಿದ್ದರಾಮಯ್ಯ

12:30 AM Dec 03, 2024 | Team Udayavani |

ತುಮಕೂರು: ದೇಶ ಆಭಿವೃದ್ಧಿಯಾಗ ಬೇಕಾದರೆ ಮೊದಲು ರಾಜ್ಯಗಳ ಅಭಿವೃದ್ಧಿಯಾಗ ಬೇಕು. ಪ್ರತೀ ಹಳ್ಳಿ, ತಾಲೂಕು, ಜಿಲ್ಲೆಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯ, ದೇಶದ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

Advertisement

ನಗರದಲ್ಲಿ ಸೋಮವಾರ ಜಿಲ್ಲಾ ವ್ಯಾಪ್ತಿಯ ಸುಮಾರು 1,259.21 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖಾ ಯೋಜನೆಗಳ ಫ‌ಲಾನುಭವಿಗಳ ಸವಲತ್ತು ವಿತರಣೆ ಸಮಾರಂಭ ಉದ್ಘಾಟಿಸಿ, ಫ‌ಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದ ಅವರು, ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಜಿಡಿಪಿ ಪ್ರಗತಿ ಕಾಣಲು ಸಾಧ್ಯವಾಗುತ್ತದೆ ಎಂದರು.

ಇಡೀ ದೇಶದಲ್ಲಿ ರಾಜ್ಯದ ಜಿಡಿಪಿ ನಂಬರ್‌ ಒನ್‌ ಆಗಿದೆ. ದೇಶದ ಜಿಡಿಪಿ ಇನ್ನೂ 8 ಇದೆ. ಆದರೆ ರಾಜ್ಯದ ಜಿಡಿಪಿ 10ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲ ಜಾತಿ ಮತ್ತು ಎಲ್ಲ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದು ವಿವರಿಸಿದರು.

ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲ ಜಾತಿ, ಎಲ್ಲ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಹೇಳಿದರು.

ಫ‌ಲಾನುಭವಿಗಳಿಗೆ ವಿತರಿಸಲು ತಂದಿದ್ದ ಎಲ್ಲ ಯೋಜನೆಗಳ ಸಲಕರಣೆಗಳನ್ನು ಫ‌ಲಾನುಭವಿಗಳ ಬಳಿಗೇ ತೆರಳಿ ಮುಖ್ಯಮಂತ್ರಿ ವಿತರಿಸಿದರು.

Advertisement

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಜಿ. ಪರಮೇಶ್ವರ್‌, ಸಹಕಾರ ಸಚಿವ ಕೆ.ಎನ್‌.ರಾಜಣ್ಣ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ಸರಕಾರದ ದಿಲ್ಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಮೊದಲಾದವರು ಇದ್ದರು.

ವಿಪಕ್ಷಗಳ ಸುಳ್ಳುಗಳಿಗೆ ಜನರು ಕಿವಿಗೊಡಬೇಡಿ: ಶಿವಕುಮಾರ್‌
ರಾಜ್ಯದ ಜನರು ವಿಪಕ್ಷಗಳ ಸುಳ್ಳುಗಳಿಗೆ ಕಿವಿಗೊಡಬೇಡಿ. ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆ. ಜತೆಗೆ ಅಭಿವೃದ್ಧಿ ಕೆಲಸಗಳಿಗೂ ಒತ್ತು ಕೊಟ್ಟಿದೆ. ಇದಕ್ಕೆ ರಾಜ್ಯದ ಜನರೇ ಸಾಕ್ಷಿ ಎಂದು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕೆಲವರು ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಅನಾವಶ್ಯಕ ಚರ್ಚೆ ಮಾಡುತ್ತಿದ್ದಾರೆ. ಸುಮಾರು 250 ಕೋಟಿ ರೂ.ಗಳಷ್ಟು ಹಣ ಗ್ಯಾರಂಟಿ ಯೋಜನೆಗಳ ಮೂಲಕ ಒಂದೊಂದು ವಿಧಾನಸಭಾ ಕ್ಷೇತ್ರ ಗಳಿಗೆ ತಲುಪುತ್ತಿದೆ. ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಮೂಲಕ ಮಹಿಳೆಯರ ಸಶಕ್ತೀಕರಣವಾಗುತ್ತಿದೆ. ಇದು ಅಭಿವೃದ್ಧಿಯಲ್ಲವೇ? ಎಂದು ಪ್ರಶ್ನಿಸಿದರು.

ತುಮಕೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಮನವಿ
ರಾಜಧಾನಿ ಬೆಂಗಳೂರಿಗೆ ಹತ್ತಿರವಿದ್ದು ಅದಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಜಿ. ಪರಮೇಶ್ವರ್‌ ಅವರು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next