Advertisement
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜ.18ರಿಂದ ನಮ್ಮ ಪರ್ಯಾಯ ಅವಧಿ ಆರಂಭವಾಗಲಿದೆ. ಈ ಅವಧಿಯಲ್ಲಿ ಈಗಾಗಲೇ ಆರಂಭಿಸಿರುವ ಕೋಟಿ ಗೀತಾ ಲೇಖನ ಯಜ್ಞವನ್ನು ಸಮಾಪ್ತಿಗೊಳಿಸಲಾಗುವುದು.
Related Articles
Advertisement
ಪರ್ಯಾಯ ಪೀಠಾರೋಹಣ ಪೂರ್ವಭಾವಿಯಾಗಿ ಕಳೆದ ಎರಡು ವರ್ಷಗಳಿಂದ ವಿಶ್ವ ಸಂಚಾರ ಕೈಗೊಳ್ಳಲಾಗಿದೆ. ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯ, ಗಲ್ಫ್ ರಾಷ್ಟ್ರ, ಉತ್ತರ ಹಾಗೂ ದಕ್ಷಿಣ ಭಾರತದ ತೀರ್ಥ ಕ್ಷೇತ್ರಗಳನ್ನು ಸಂಚರಿಸಿ ಶನಿವಾರ ಮಂಗಳೂರಿನಲ್ಲಿ ವಿಶ್ವ ಸಂಚಾರಕ್ಕೆ ಮಂಗಳ ಹಾಡಲಾಗಿದೆ. ಜ.7ರಂದು ಮಂಗಳೂರಲ್ಲಿ ಪೌರ ಸಮ್ಮಾನ ಸ್ವೀಕರಿಸಿ, ಅಲ್ಲಿಂದ ಜ. 8ರಂದು ಉಡುಪಿ ಪುರಪ್ರವೇಶ ಮಾಡಲಾಗುವುದು. ಬಳಿಕ ಪರ್ಯಾಯ ಮಹೋತ್ಸವದ ವಿಧಿವತ್ತಾದ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ಪುತ್ತಿಗೆಶ್ರೀ ಹೇಳಿದರು.
ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಪ್ರೊ| ಎಂ.ಬಿ. ಪುರಾಣಿಕ್, ಪುತ್ತಿಗೆ ಮಠದ ಅಂತಾರಾಷ್ಟ್ರೀಯ ದಿವಾನ ಪ್ರಸನ್ನ ಇದ್ದರು.
ವಿಶ್ವ ಗೀತಾ ಪರ್ಯಾಯಕ್ಕೆ ಐದು ಗುರಿನಮ್ಮದು ನಾಲ್ಕನೇ ಪರ್ಯಾಯವಾಗಿದ್ದು, ಇದನ್ನು ವಿಶ್ವ ಗೀತಾ ಪರ್ಯಾಯ ಎಂದು ಕರೆಯುತ್ತೇವೆ. ಈ ಪರ್ಯಾಯದಲ್ಲಿ ಭಗವದ್ಗೀತೆ ಬಗ್ಗೆ ಅರ್ಥಪೂರ್ಣ ಜಾಗೃತಿ ಮೂಡಿಸಲಾಗುವುದು. ಕೃಷ್ಣ ಮಠದ ಗೀತಾ ಮಂದಿರದಲ್ಲಿ ಅಖಂಡ ಗೀತಾ ಪಾರಾಯಣ ನಡೆಸಿ ಕೃಷ್ಣನಿಗೆ ಅರ್ಪಿಸಲಾಗುವುದು. 700 ಶ್ಲೋಕಗಳಿಂದ ಭಗವದ್ಗೀತಾ ಮಹಾಯಾಗ ನಡೆಸಲಾಗುವುದು. ಅಂತಾರಾಷ್ಟ್ರೀಯ ಗೀತಾ ಸಮ್ಮೇಳನ ಆಯೋಜಿಸಲಾಗುವುದು. ಸನ್ಯಾಸ ಸ್ವೀಕರಿಸಿ 50 ವರ್ಷ ಸಲ್ಲುವ ಹಿನ್ನೆಲೆಯಲ್ಲಿ ಶ್ರೀಕೃಷ್ಣನಿಗೆ ಬಂಗಾರದ ರಥ ಸಮರ್ಪಿಸಲಾಗುವುದು. ಈ ರಥವನ್ನು ಶ್ರೀಕೃಷ್ಣನ ಗರ್ಭಗುಡಿಯ ಸುತ್ತಲೂ ಎಳೆಯಲು ಅವಕಾಶ ಇದೆ. ಮಳೆ ಬಂದರೂ ರಥೋತ್ಸವಕ್ಕೆ ತೊಂದರೆಯಾಗದು. ಯಾತ್ರಿಗಳ ಅನುಕೂಲಕ್ಕೆ ಉಡುಪಿಯಲ್ಲಿ 108 ಕೊಠಡಿಗಳ ಅಷ್ಟೋತ್ತರ ಭವನ ನಿರ್ಮಿಸಲು ಸಂಕಲ್ಪಿಸಲಾಗಿದೆ, ಕಲ್ಸಂಕದಲ್ಲಿ ಮಧ್ವಾಚಾರ್ಯರು ಕೃಷ್ಣನನ್ನು ಎತ್ತಿ ತರುವಂತಹ ಪ್ರತಿಮೆ ಇರುವ ಮಹಾದ್ವಾರವನ್ನೂ ನಿರ್ಮಿಸಲಾಗುವುದು ಎಂದರು. ಪರ್ಯಾಯೋತ್ಸವಕ್ಕೆ ವಿದೇಶಿ ಗಣ್ಯರು
ಜ.17ರಂದು ನಡೆಯುವ ಪುತ್ತಿಗೆ ಪರ್ಯಾಯದಲ್ಲಿ ಪಾಲ್ಗೊಳ್ಳಲು ವಿದೇಶಿಯರಿಗೂ ಆಹ್ವಾನ ನೀಡಲಾಗಿದೆ. ಅಮೆರಿಕಾ, ಜಪಾನ್ ಸಹಿತ ಹಲವು ದೇಶಗಳಿಂದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತಿಗೆ ಶ್ರೀ ತಿಳಿಸಿದರು.