Advertisement

ಅಂಬಾವಿಲಾಸ ಅರಮನೆಯಲ್ಲಿ ರತ್ನಸ್ವರ್ಣ ಸಿಂಹಾಸನ ಜೋಡಣೆ

10:46 PM Sep 24, 2019 | Lakshmi GovindaRaju |

ಮೈಸೂರು: ರಾಜ ಮನೆತನದವರು ನಡೆಸುವ ನವರಾತ್ರಿ ಉತ್ಸವದ ಪ್ರಮುಖ ಭಾಗವಾಗಿರುವ ಖಾಸಗಿ ದರ್ಬಾರ್‌ಗಾಗಿ ಮಂಗಳವಾರ ಅರಮನೆಯ ದರ್ಬಾರ್‌ ಹಾಲ್‌ನಲ್ಲಿ ರತ್ನಖಚಿತ ಸ್ವರ್ಣ ಸಿಂಹಾಸನ, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಿಸಲಾಯಿತು. ನವರಾತ್ರಿ ಹಿನ್ನೆಲೆಯಲ್ಲಿ ಸೆ.29ರಿಂದ ಅ.8ರವರೆಗೆ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಜರುಗಲಿದ್ದು, ಪ್ರತಿ ದಿನ ಸಂಜೆ ಖಾಸಗಿ ದರ್ಬಾರ್‌ ನಡೆಯಲಿದೆ.

Advertisement

ಸಿಂಹಾಸನ ಮತ್ತು ಭದ್ರಾಸನ ಜೋಡಣೆ ಹಿನ್ನೆಲೆಯಲ್ಲಿ ಮಂಗಳವಾರ ಮುಂಜಾನೆಯಿಂದಲೇ ಅರಮನೆಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಶಾಂತಿ ಪೂಜೆ ನಂತರ ಬೆಳಗ್ಗೆ 10.45ಕ್ಕೆ ಅರಮನೆಯ ನೆಲಮಾಳಿಗೆಯಲ್ಲಿರುವ ಭದ್ರತಾ ಕೊಠಡಿಯನ್ನು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಯಿತು.

ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೇ ಬಿಡಿ ಭಾಗವನ್ನು ದರ್ಬಾರ್‌ ಹಾಲ್‌ಗೆ ತರಲಾ ಯಿತು. ಸುಮಾರು 13 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಸಿಂಹಾಸನವನ್ನು ಜೋಡಿಸಿ, ಪರದೆ ಬಿಡಲಾಯಿತು. ಸಿಂಹಾಸನ ಜೋಡಣೆ ಬಳಿಕ ಅರ ಮನೆಯ ಕನ್ನಡಿ ತೊಟ್ಟಿಯಲ್ಲಿ ಬೆಳ್ಳಿಯ ಭದ್ರಾಸನ ಜೋಡಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next