ಬೆಂಗಳೂರು: ಶಿಕ್ಷಕರ ನೇಮಕಾತಿ ಸಾಮಾನ್ಯ ಪ್ರವೇಶ ಪರೀಕ್ಷೆಯು ಮೇ 21 ಮತ್ತು 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಮಾ.22 ರಿಂದ ಏ.22ರ ವರೆಗೆ ಅರ್ಜಿ ಸಲ್ಲಿಕೆ ಅವಕಾಶವಿದೆ. ಆರರಿಂದ ಎಂಟು ತಿಂಗಳಿನಲ್ಲಿ ಪ್ರಕ್ರಿಯೆ ಪೂರ್ಣವಾಗಲಿದೆ ಎಂದರು.
ಇದನ್ನೂ ಓದಿ:ಪಾಕಿಸ್ತಾನ ಹಾರಿಸಿದ ಕ್ಷಿಪಣಿ ಗುರಿ ಮುಟ್ಟದೇ ಸಮೀಪದಲ್ಲೇ ಪತನ, ಅಲ್ಲಗಳೆದ ಪಾಕ್!
ಪರೀಕ್ಷೆಗೆ ಮೂರು ಪತ್ರಿಕೆಗಳು ಇರುತ್ತದೆ. ಮೊದಲ ಮತ್ತು ಎರಡನೇ ಪತ್ರಿಕೆ ತಲಾ 150 ಅಂಕಗಳು, ಮೂರನೇ ಪತ್ರಿಕೆ ನೂರು ಅಂಕ ಇರುತ್ತದೆ. ಎರಡನೇ ಪತ್ರಿಕೆ ಅರ್ಹತಾ ಅಂಕಗಳನ್ನು 50 ರಿಂದ 45 ಕ್ಕೆ ಮತ್ತು ಮೂರನೇ ಪತ್ರಿಕೆ 60ರಿಂದ 50ಕ್ಕೆ ಇಳಿಕೆ ಮಾಡಲಾಗಿದೆ.