Advertisement
ತಾಲೂಕಿನ ಹಳಿಯೂರು ಗ್ರಾಮದಲ್ಲಿ ರಾಜ್ಯ ಪ್ರಾಚ್ಯವಸ್ತು ಇಲಾಖೆ ಮತ್ತು ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ 25 ಲಕ್ಷ ರೂಗಳ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಿರುವ ಸೋಮೇಶ್ವರ ದೇವಾಲಯ ಮತ್ತು 4 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಮಡಿವಾಳ ಮಾಚೀದೇವರ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು.
Related Articles
Advertisement
ಶಾಸಕ ಸಾ.ರಾ.ಮಹೇಶ್ ಮಾತನಾಡಿ, ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ 20 ತಿಂಗಳ ಅವಧಿಯಲ್ಲಿ ನಡೆಸಿದ ಜನಪರ ಮತ್ತು ಬಡವರ ಪರವಾದ ಕಾರ್ಯಕ್ರಮಗಳು ಜನ ಮಾನಸದಲ್ಲಿ ನೆಲೆಸಿದ್ದು, ರಾಜ್ಯದ ಮತದಾರರು ಅವರಿಗೆ ಆಶೀರ್ವಾದ ಮಾಡಲು ತೀರ್ಮಾನಿಸಿದ್ದಾರೆ. ಮತ್ತೆ ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂಬ ಭರವಸೆ ವ್ಯಕ್ತಪಡಿಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ.ಸೋಮಶೇಖರ್, ಜಿಪಂ ಮಾಜಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್, ಸದಸ್ಯೆ ವೀಣಾಕೀರ್ತಿ, ಮಾಜಿ ಜಿಲ್ಲಾ ಪರಿಷತ್ ಸದಸ್ಯ ಡಿ.ಎಸ್.ಜಗದೀಶ್, ತಾಪಂ ಸದಸ್ಯೆ ಮಮತಾಮಹೇಶ್, ಎಪಿಎಂಸಿ ಅಧ್ಯಕ್ಷ ಕೃಷ್ಣೇಗೌಡ, ಹಳಿಯೂರು ಗ್ರಾ ಪಂ ಅಧ್ಯಕ್ಷೆ ರತ್ನಮ್ಮ,
-ಹೆಚ್.ಕೆ.ಭಾಸ್ಕರ್, ಸದಸ್ಯರಾದ ಕೃಷ್ಣಮೂರ್ತಿ, ಮಂಜುಳ, ರಿಜಾÌನಮುಸ್ತಾಕ್, ಸಹಕಾರ ಸಂಘದ ನಿರ್ದೇಶಕರಾದ ಹೆಚ್. ಆರ್.ಮಹೇಶ್, ಜವರಯ್ಯ, ಪ್ರಭಾಕರ್, ಮುಖಂಡರಾದ ಹೆಚ್.ಕೆ.ಮಧುಚಂದ್ರ, ಹೆಚ್.ಎಂ.ಮಹದೇವ್, ತಹಶೀಲ್ದಾರ್ ಜಿ.ಹೆಚ್.ನಾಗರಾಜು, ಇಒ ಸಿ.ಚಂದ್ರು, ಸಿಪಿಐ ಬಸವರಾಜು ಸೇರಿದಂತೆ ಇನ್ನಿತರರು ಇದ್ದರು.
ಚುನಾವಣೆಯಲ್ಲಿ ಉತ್ತರ..ಹೊಸೂರು: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನನ್ನ ಮೇಲೆ ನಿರಾಧಾರವಾಗಿರುವ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿ ಜೈಲಿಗೆ ಕಳುಹಿಸುವ ಹುನ್ನಾರ ನಡೆಸುತ್ತಿದ್ದು ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ಈ ಕುತಂತ್ರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಹಳಿಯೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಯಾರೊಂದಿಗೂ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಮೈತ್ರಿ ಇಲ್ಲಾ. ಬಹುಮತ ಬರದಿದ್ದರೆ ಮತ್ತೆ ಚುನಾವಣೆ ಎದುರಿಸಲು ಸಿದ್ಧ ಎಂದರು. ಉತ್ತರ ಕರ್ನಾಟದ ಭಾಗದಲ್ಲಿ ಪಕ್ಷ ಬಲಪಡಿಸುವ ದೃಷ್ಟಿಯಿಂದ ಅಲ್ಲಿ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಪಕ್ಷದ ಮುಖಂಡರು ಮತ್ತು ಕಾರ್ಯ ಕರ್ತರಿಂದ ಹೆಚ್ಚುತ್ತಿದ್ದು, ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು. ಎರಡು ಕಡೆಗಳಲ್ಲಿಯೂ ಸ್ಪರ್ಧಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇನೆ ಎಂದು ತಮ್ಮ ಇಂಗಿತ ವ್ಯಕ್ತಪಡಿಸಿದರು. ಮಾಜಿ ಸಂಸದ ಹೆಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗುವ ವಿಚಾರದ ಚರ್ಚೆ ಪೂರ್ಣಗೊಂಡಿದ್ದು ಶೀಘ್ರ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಭರವಸೆ ವ್ಯಕ್ತಪಡಿಸಿದರು.