Advertisement

ಬಿಡುಗಡೆ ಮುಂದೂಡಿದ “ಜಂಟಲ್‌ಮನ್‌’

09:32 AM Jan 23, 2020 | Lakshmi GovindaRaj |

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಪ್ರಜ್ವಲ್‌ ದೇವರಾಜ್‌ ಅಭಿನಯದ “ಜಂಟಲ್‌ಮನ್‌’ ಚಿತ್ರ ಜನವರಿ 31 ರಂದು ತೆರೆಕಾಣಬೇಕಿತ್ತು. ಆದರೆ, ಈಗ ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಚಿತ್ರ ಫೆ.07 ರಂದು ತೆರೆಕಾಣುತ್ತಿದೆ.

Advertisement

ಜಡೇಶ್‌ ಕುಮಾರ್‌ ನಿರ್ದೇಶನದಲ್ಲಿ ಮೂಡಿಬಂದಿರುವ “ಜಂಟಲ್‌ ಮನ್‌’ ಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್‌ಗೆ ನಾಯಕಿಯಾಗಿ ನಿಶ್ವಿ‌ಕಾ ನಾಯ್ಡು ಜೋಡಿಯಾಗಿದ್ದಾರೆ. ಉಳಿದಂತೆ ಸಂಚಾರಿ ವಿಜಯ್‌, ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸಿದ್ದಾರೆ. ಗುರು ದೇಶಪಾಂಡೆ ಈ ಚಿತ್ರದ ನಿರ್ಮಾಪಕರು.

“ಜಂಟಲ್‌ಮನ್‌’ ಚಿತ್ರದಲ್ಲಿ ನಾಯಕ ಪ್ರಜ್ವಲ್‌ ದೇವರಾಜ್‌ “ಸ್ಲಿಪಿಂಗ್‌ ಸಿಂಡ್ರೋಮ್‌’ ಅಥವಾ ಹೈಪರ್‌ ಸೋಮ್ನಿಯಾ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ದಿನಕ್ಕೆ 18 ಗಂಟೆ ಮಾಡುವ ನಿದ್ರೆ ಮಾಡುವ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಪ್ರಜ್ವಲ್‌ ದೇವರಾಜ್‌ ಅವರಿಗೆ ಹೊಸ ಬಗೆಯ ಸಿನಿಮಾ.ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು, ಟ್ರೇಲರ್‌ಗಳಿಗೆ ಕನ್ನಡ ಚಿತ್ರರಂಗದ ಸ್ಟಾರ್‌ ನಟ-ನಟಿಯರು ಸಾಥ್‌ ನೀಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next