Advertisement

ಜಲಮೂಲಗಳ ಜಿಯೋ ಟ್ಯಾಗಿಂಗ್‌ : ಪಿಯೂಷ್‌ ರಂಜನ್‌ ಸಲಹೆ

12:38 AM Jun 17, 2022 | Team Udayavani |

ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಆ ಜಲಮೂಲಗಳನ್ನು ಜಿಯೋ ಟ್ಯಾಗಿಂಗ್‌ಗೆ ಒಳಪಡಿಸುವಂತೆ ಕೇಂದ್ರ ರಕ್ಷಣಾ ಸಚಿವಾಲಯದ ನಿರ್ದೇಶಕ, ಜಲಶಕ್ತಿ ಅಭಿಯಾನದ ಕೇಂದ್ರದ ನೋಡಲ್‌ ಅಧಿಕಾರಿ ಪಿಯೂಷ್‌ ರಂಜನ್‌ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ನಗರದ ಜಿಲ್ಲಾ ಪಂಚಾಯತ್‌ ಮಿನಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಲ ಶಕ್ತಿ ಅಭಿಯಾನದಲ್ಲಿ ಎಲ್ಲ ಜಲಮೂಲಗಳನ್ನು ಗುರುತಿಸಿ, ಅವುಗಳ ಸಂರಕ್ಷಣೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಅದರಲ್ಲಿ ಮಳೆ ನೀರುಕೊಯಿಲು ಮಹತ್ವದ ಪಾತ್ರ ವಹಿಸಿದೆ. ಮಳೆ ಎಲ್ಲಿ, ಯಾವ ಜಾಗದಲ್ಲಿ ಬೀಳುತ್ತದೆಯೋ ಆ ನೀರನ್ನು ಹಿಡಿದಿಡುವ ದ್ಯೇಯ ಹೊಂದಿರುವ ಜಲಶಕ್ತಿ ಅಭಿಯಾನದಲ್ಲಿ ಜಲಶಕ್ತಿ ಮೂಲಗಳ ಸಂರಕ್ಷಣೆಯೂ ಅತ್ಯಂತ ಮಹತ್ವ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಇರುವ ಎಲ್ಲ ಜಲ ಮೂಲಗಳನ್ನು ಜೀಯೋ ಟ್ಯಾಂಗಿಗ್‌ಗೆ ಒಳಪಡಿಸುವಂತೆ ಅವರು ತಿಳಿಸಿದರು.

ಜಲಶಕ್ತಿ ಕೇಂದ್ರ ಸ್ಥಾಪನೆಗೆ ಸಲಹೆ :

ಜಿಲ್ಲೆಯಲ್ಲಿ ಜಲಶಕ್ತಿ ಕೇಂದ್ರವೊಂದನ್ನು ಸ್ಥಾಪಿಸುವಂತೆ ತಿಳಿಸಿದ ಅವರು, ಸಂಪೂರ್ಣವಾಗಿ ಜಿಲ್ಲೆಯಲ್ಲಿ ಜಲ ಸಂರಕ್ಷಣ ಯೋಜನೆಯನ್ನು ರೂಪಿಸುವಂತೆ ಸಲಹೆ ನೀಡಿದರು. ಅಮೃತ ಸರೋವರ ಯೋಜನೆಯಡಿ ಒಂದು ಎಕರೆ ಪ್ರದೇಶದೊಳಗೆ ಲಭ್ಯವಿರುವ ಜಲ ಮೂಲಗಳನ್ನು ಪುನರುಜ್ಜೀವನಗೊಳಿಸುವಂತೆ ಅಥವಾ ಸಾಧ್ಯವಿದ್ದರೆ ಹೊಸ ಜಲಮೂಲಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ನೆಹರೂ ಯುವ ಕೇಂದ್ರದ ವ್ಯಾಪ್ತಿಯ ಯುವ ಕ್ಲಬ್‌ಗಳ ಮೂಲಕ ಜಲಸಂರಕ್ಷಣೆಯ ಬಗ್ಗೆ ಜನ ಸಮುದಾಯದಲ್ಲಿ ಮಾಹಿತಿ, ಶಿಕ್ಷಣ ಹಾಗೂ ಸಂವಹನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು. ಜಲಮೂಲಗಳನ್ನು ಸಂರಕ್ಷಿಸಿದ ಕಾರ್ಯಗಳ ಛಾಯಾಚಿತ್ರ ಹಾಗೂ ವಿಡಿಯೋಗಳನ್ನು ವೆಬ್‌ ಪೋರ್ಟಲ್‌ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವಂತೆ ಸೂಚಿಸಿದರು.

Advertisement

15 ಜಲಮೂಲ ಪುನರುಜ್ಜೀವನ :

ಜಿ.ಪಂ. ಸಿಇಒ ಡಾ| ಕುಮಾರ್‌ ಮಾತನಾಡಿ, ಜಿಲ್ಲೆಯ ಎಲ್ಲ ಜಲಮೂಲಗಳ ರಕ್ಷಣೆಗೆ ಜಿಯೋ ಟ್ಯಾಗಿಂಗ್‌ಯೋಜನೆ ರೂಪಿಸಲಾಗುತ್ತಿದೆ. ಅಮೃತ ಸರೋವರ ಯೋಜನೆಯಡಿ 15 ಜಲಮೂಲಗಳನ್ನು ಪುನರುಜ್ಜೀವನಗೊಳಿಸಲಾಗಿದೆ ಎಂದರು.

ಜಲಶಕ್ತಿ ಅಭಿಯಾನದ ತಾಂತ್ರಿಕ ಅಧಿಕಾರಿ ಡಾ| ಎಲ್‌.ಎಂ. ಠಾಕೂರ್‌ ಮಾತನಾಡಿದರು. ಜಿ.ಪಂ. ಉಪ ಕಾರ್ಯದರ್ಶಿ ಆನಂದ್‌ ಕುಮಾರ್‌, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸೀತಾ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next