Advertisement

ರಾಜೀನಾಮೆ ನೀಡಲ್ಲ: ಸಚಿವ ಜಾರ್ಜ್‌ 

08:40 AM Sep 06, 2017 | Karthik A |

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಸಿಬಿಐಗೆ ವಹಿಸಿರುವುದನ್ನು ಸ್ವಾಗತಿಸುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ಈಗಾಗಲೇ ಸಿಐಡಿ ತನಿಖೆ ನಡೆಸಿ ಬಿ ರಿಪೋರ್ಟ್‌ ಸಲ್ಲಿಸಿದೆ. ಸಿಐಡಿ ತನಿಖೆ ಸಂದರ್ಭ ನಾನೇ ಸ್ವಪ್ರೇರಣೆಯಿಂದ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಿದ್ದೆ. ಈಗ ಅದೇ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವುದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೇಳಿದ ತತ್‌ಕ್ಷಣ ಕೊಡಲಿಕ್ಕೆ ಆಗುವುದಿಲ್ಲ. ಬಿಜೆಪಿಯ ಅನೇಕ ಕೇಂದ್ರ ಸಚಿವರ ಮೇಲೆ ಪ್ರಕರಣಗಳಿವೆ. ಅವರಾರೂ ರಾಜೀನಾಮೆ ನೀಡಿಲ್ಲ. ನಾನೂ ರಾಜೀನಾಮೆ ನೀಡುವ ಆವಶ್ಯಕತೆ ಇಲ್ಲ ಎಂದು ಜಾರ್ಜ್‌ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next