Advertisement

ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ಜಾರ್ಜ್‌

11:21 AM Jul 19, 2017 | Team Udayavani |

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಕೆ.ಜೆ. ಜಾರ್ಜ್‌ ಅವರು ಮಂಗಳವಾರ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬಿಬಿಎಂಪಿ ಮತ್ತು ಬಿಡಿಎ ಸ್ವತ್ತುಗಳಿಗೆ ಸೇರಿದ ಆಟದ ಮೈದಾನ, ಸಾರ್ವಜನಿಕ ಆಸ್ಪತ್ರೆ ಹಾಗೂ ಇನ್ನಿತರ ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಟ್ಟ ಸ್ಥಳಗಳ ಪರಿವೀಕ್ಷಣೆ ನಡೆಸಿದರು.

Advertisement

ಇದೇ ವೇಳೆ ಉದ್ದೇಶಿತ ನೆಲಮಟ್ಟದ ಜಲಾಶಯ ನಿರ್ಮಾಣಕ್ಕೆ ನಿಗದಿಪಡಿಸಿರುವ ಸ್ಥಳಕ್ಕೂ ಸಚಿವರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳು ಹಾಜರಿದ್ದರು. 

ಇದೇ ಸಂದರ್ಭದಲ್ಲಿ ಬಾಣಸವಾಡಿಯ ಎ.ಕೆ. ಕಾಲೋನಿಯ ನಿವಾಸಿಗಳು ಅಲ್ಲಿನ ಕುಡಿಯುವ ನೀರು ಮತ್ತು ಒಳಚರಂಡಿ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದರು. ಆಗ ಸ್ಥಳದಲ್ಲೇ ಇದ್ದ ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಜಾರ್ಜ್‌ ಸೂಚನೆ ನೀಡಿದರು. 

Advertisement

Udayavani is now on Telegram. Click here to join our channel and stay updated with the latest news.

Next