Advertisement

ಚಾರಿತ್ರ್ಯದೊಂದಿಗೆ ಉನ್ನತ ಶಿಕ್ಷಣ ಪಡೆಯಿರಿ

12:41 PM Nov 22, 2021 | Team Udayavani |

ಭಾಲ್ಕಿ: ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ರೂಢಿಸಿಕೊಂಡು ಉನ್ನತ ಶಿಕ್ಷಣದೊಂದಿಗೆ ಜೀವನದಲ್ಲಿ ಯಶಸ್ಸು ಕಾಣಬೇಕು ಎಂದು ಯುವ ಮುಖಂಡ ಪ್ರಸನ್ನ ಖಂಡ್ರೆ ಹೇಳಿದರು.

Advertisement

ಪಟ್ಟಣದ ಶ್ರೀ ಗುರು ಪ್ರಸನ್ನ ಪದವಿ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಹಾಗೂ ಬಿ.ಕಾಂ, ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸಿನ ಏಕೈಕ ಮಂತ್ರ ಪರಿಶ್ರಮ. ವಿದ್ಯಾರ್ಥಿಗಳು ದೊರೆತ ಅವಕಾಶ ಸಮರ್ಥವಾಗಿ ಬಳಸಿಕೊಂಡು ಉತ್ತಮ ಜೀವನ ಮೌಲ್ಯ ಬದುಕಿನಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ಜೀವನ ಸಾಗಿಸಲು ಸಾಧ್ಯ ಎಂದರು.

ಪ್ರಾಚಾರ್ಯ ಅಶೋಕ ರಾಜೋಳೆ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಆಸಕ್ತಿ, ಆಲೋಚನೆ ಹಾಗೂ ಶ್ರದ್ಧಾಭಕ್ತಿ ಮೈಗೂಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಪ.ಪೂ ಕಾಲೇಜು ಉಪನ್ಯಾಸಕಿ ಶೀತಲ ವಾಡೇಕರ ಮಾತನಾಡಿ, ನಮ್ಮ ಕಾಲೇಜಿನಿಂದ ಶಿಕ್ಷಣ ಪಡೆದು ಹೊರಹೊಮ್ಮಿದ ಅನೇಕ ವಿದ್ಯಾರ್ಥಿಗಳು ಹಲವಾರು ಸಂಸ್ಥೆಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಕಾಲೇಜಿನ ಅಭಿವೃದ್ಧಿಯಲ್ಲಿ ಹಳೇ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು ಎಂದರು.

Advertisement

ಇದೇ ಸಂದರ್ಭದಲ್ಲಿ ಪದವಿ ಕಾಲೇಜಿನಲ್ಲಿ ಅತ್ಯುತ್ತಮ ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ವೇಳೆ ಆಡಳಿತಾಧಿಕಾರಿ ಬಾಲರಾಜ ಶಿವಂಗೆ, ಪಿಯು ಕಾಲೇಜು ಪ್ರಾಚಾರ್ಯ ರಾಜಕುಮಾರ ಮೇತ್ರೆ, ಐಟಿಐ ಪ್ರಾಚಾರ್ಯ ಸತೀಶ ಬಿರಾದಾರ, ಮುಖ್ಯಗುರು ಅಮೃತ ಮೇತ್ರೆ, ಉಪನ್ಯಾಸಕ ರೇವಣಸಿದ್ದಯ್ಯ ಸ್ವಾಮಿ ಇದ್ದರು. ಪದವಿ ಕಾಲೇಜು ಪ್ರಾಚಾರ್ಯ ವಿಷ್ಣುವರ್ಧನ ಕೋಟೆ ಸ್ವಾಗತಿಸಿದರು. ರೂಬಿನಾ ನಿರೂಪಿಸಿದರು. ಉಪನ್ಯಾಸಕಿ ಸಂಗೀತಾ ಬಿರಾದಾರ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next