Advertisement

ತಪ್ಪದೇ ಕೋವಿಡ್‌ ಲಸಿಕೆ ಪಡೆಯಿರಿ: ಚವ್ಹಾಣ

10:03 AM Jun 12, 2021 | Team Udayavani |

ಬೀದರ: ಕೋವಿಡ್‌ ಸೋಂಕು ಸಂಪೂರ್ಣ ಮಟ್ಟ ಹಾಕಲು ತಪ್ಪದೇ ಲಸಿಕೆ ಪಡೆಯಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Advertisement

ಕೋವಿಡ್‌ ಲಸಿಕೆ ಕುರಿತು ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿರುವುದರಿಂದ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಕೋವಿಡ್‌ ಲಸಿಕೆ ಅತ್ಯಂತ ಸುರಕ್ಷಿತವಿದೆ. ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಸಚಿವರು, ಶಾಸಕರು, ಸಂಸದರು ಸೇರಿದಂತೆ ಅನೇಕ ಪ್ರಮುಖರು ಲಸಿಕೆ ಪಡೆದಿದ್ದಾರೆ. ಮೊದಲು ಲಸಿಕೆ ಬಗ್ಗೆ ಅಪಸ್ವರ ಎ¤ದವರು ಲಸಿಕೆ ಮಹತ್ವ ಅರಿವಾದ ನಂತರ ಲಸಿಕೆ ಪಡೆಯುತ್ತಿದ್ದಾರೆ. ಹಾಗಾಗಿ ಲಸಿಕೆ ಬಗ್ಗೆ ಯಾವುದೇ ಅನುಮಾನಗಳು ಬೇಡ ಎಂದಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿವರೆಗೆ ಕೇಂದ್ರ ಸರ್ಕಾರಿಂದ 2,84,279 ಡೋಸ್‌, ರಾಜ್ಯ ಸರ್ಕಾರದಿಂದ 67,986 ಡೋಸ್‌ ಲಸಿಕೆ ನೀಡಲಾಗಿದೆ. ಜಿಲ್ಲೆಯನ್ನು ಕೋವಿಡ್‌ ಮುಕ್ತವಾಗಿಸುವ ದೃಢ ಸಂಕಲ್ಪ ಮಾಡಿದ್ದು, ಇದಕ್ಕೆ ಜಿಲ್ಲಾಡಳಿತ, ಆರೋಗ್ಯ ಹಾಗೂ ಪೊಲೀಸ್‌ ಸೇರಿದಂತೆ ಎಲ್ಲ ಇಲಾಖೆಗಳು ಉತ್ತಮ ಸಹಕಾರ ನೀಡುತ್ತಿವೆ. ಇದರಿಂದ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ. ಸೋಂಕು ಸಂಪೂರ್ಣ ನಿವಾರಿಸಲು ಲಸಿಕೆ ರಾಮಬಾಣದಂತೆ ಕೆಲಸ ಮಾಡುತ್ತದೆ. ಜೂ.21ರಿಂದ ಕೇಂದ್ರ ಸರ್ಕಾರದಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುತ್ತಿದೆ. ಯಾವುದೇ ಅಪಪ್ರಚಾರಗಳಿಗೆ ಕಿಡಿಗೊಡದೇ ತಪ್ಪದೇ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಹೊಸ ರೋಗಿಗಳ ಪತ್ತೆ ಹಾಗೂ ಚಿಕಿತ್ಸೆ ನೀಡುವ ಉದ್ದೇಶದಿಂದ “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಮೂಲಕ ವೈದ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆಗೆ ಭೇಟಿ ನೀಡಿ, ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಈ ಕಾರ್ಯಕ್ರಮ ಜಿಲ್ಲೆಯಲ್ಲಿ 100 ಪ್ರತಿಶತ ಅನುಷ್ಠಾನಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮನೆಗೆ ಬರುವ ಆರೋಗ್ಯ ಇಲಾಖೆ ಸಿಬ್ಬಂದಿಯೊ

Advertisement

Udayavani is now on Telegram. Click here to join our channel and stay updated with the latest news.

Next