Advertisement

ಪ್ರತಿಯೊಬ್ಬರು ಕೋವಿಡ್‌ ಲಸಿಕೆ ಪಡೆಯಿರಿ: ಶಾಸಕ ಮುದ್ನಾಳ

07:47 PM Mar 13, 2021 | Team Udayavani |

ಯಾದಗಿರಿ: ಕೋವಿಡ್‌ ವಿರುದ್ಧ ಗೆಲುವು ಸಾಸಲು ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಸಂಪೂರ್ಣ ಕೋವಿಡ್‌ ಮುಕ್ತವಾಗುವವರೆಗೂ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಬೇಕೆಂದು ಶಾಸಕ ವೆಂಕಟರಡ್ಡಿ ಗೌಡ ಮುದ್ನಾಳ ಹೇಳಿದರು.

Advertisement

ಮುದ್ನಾಳ ಗ್ರಾಮದಲ್ಲಿ ಶುಕ್ರವಾರ ಪಂಚಾಯತ್‌ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಕೋವಿಡ್‌- 19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಲಸಿಕೆ ಪಡೆಯುವ ಸಂದರ್ಭದಲ್ಲಿ ಯಾವುದೇ ತಪ್ಪು ಗ್ರಹಿಕೆ ಬೇಡ. ಎಲ್ಲ ಹಿರಿಯರು ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆಯಬೇಕೆಂದು ಹೇಳಿದರು.

ಜಿಲ್ಲಾಧಿ ಕಾರಿ ಡಾ| ರಾಗಪ್ರಿಯಾ ಆರ್‌. ಮಾತನಾಡಿ, ಜಿಲ್ಲೆಯಲ್ಲಿ 85 ಸಾವಿರ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಕೊರೊನಾ ಲಸಿಕೆ ನೀಡುವ ಅಭಿಯಾನ ಮೊದಲ ಹಂತದಲ್ಲಿ ಶೇ.90 ಹಾಗೂ ಎರಡನೇ ಹಂತದಲ್ಲಿ ಶೇ.57.97ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತೆಯರಿಗೆ ಲಸಿಕೆ ನೀಡಲಾಗಿದೆ ಎಂದರು.

ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಲಸಿಕೆ ನೀಡಲಾಗುತ್ತಿದೆ. ಮೊದಲ ಲಸಿಕೆ ಪಡೆದ 28 ದಿನಗಳ ಬಳಿಕ 2ನೇ ಲಸಿಕೆ ತಪ್ಪದೇ ಪಡೆಯಬೇಕು. ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯದವರು ಈಗ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿ ಕಾರಿ ಡಾ| ಇಂದುಮತಿ ಕಾಮಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ನೊಂದಾಯಿತ 56 ಆಸ್ಪತ್ರೆಗಳಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಬಹುದು. ಇಲ್ಲವೇ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿ ಫೋಟೋ ಐಡಿಯೊಂದಿಗೆ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬಹುದು ಎಂದು ಹೇಳಿದರು.

Advertisement

ಈ ವೇಳೆ ಮುದ್ನಾಳ ಗ್ರಾಪಂ ಅಧ್ಯಕ್ಷೆ ವಿಜಯಲಕೀÒ$¾, ತಾಪಂ ಸದಸ್ಯೆ ಗೌರಿಬಾಯಿ, ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಜಿಪಂ ಸಿಇಒ ಶಿಲ್ಪಾ ಶರ್ಮಾ, ಆರ್‌ಸಿಎಚ್‌ ಅಧಿ ಕಾರಿ ಡಾ| ಸೂರ್ಯಪ್ರಕಾಶ ಕಂದಕೂರ, ಟಿಎಚ್‌ಒ ಡಾ| ಹಣಮಂತ, ಡಾ.ನಾಗೇಶ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next