Advertisement
ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಬೂತ್ ಮಟ್ಟದ ಕಾರ್ಯಕರ್ತರಿಗಾಗಿ ಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ಕಾರ್ಯಾಗಾರದಲ್ಲಿ ಮಾತನಾಡುತ್ತಾ, ಭಾರತದಲ್ಲಿ ತಂತ್ರಜ್ಞಾನಕ್ಕೆ ಅಡಿಪಾಯ ಹಾಕಿದವರು ದಿವಂಗತ ಮಾಜಿ ಪ್ರಧಾನಿ ರಾಜೀವ್‌ಗಾಂಧಿ.
Related Articles
Advertisement
ಸುಳ್ಳುಗಳನ್ನು ತಿಳಿಸಿ: ಮೋದಿ ಅಧಿಕಾರಕ್ಕೆ ಬಂದ ಮೇಲೆ ಮನ್ ಕಿ ಬಾತ್, ಸಾರ್ಟ್ ಅಪ್, ಸ್ಟಾಂಡ್ ಅಪ್ ಅಂತೆಲ್ಲ ಹೇಳುತ್ತಾರೆ. ರೈತರಿಗೆ ನೆರವಾಗುವ ಯೋಜನೆ ನೀಡಲಿಲ್ಲ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಿಲ್ಲ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗಾಗಿ, ದಲಿತರಿಗಾಗಿ ಯಾವ ಯೋಜನೆ ತರಲಿಲ್ಲ, ಬರೀ ಘೋಷಣೆಗಳಿಂದ ಚುನಾವಣೆ ಗೆಲ್ಲಬಹುದು ಎನ್ನುವ ಮನಸ್ಥಿತಿ ಹೊಂದಿದ್ದಾರೆ. ಅವರ ಸುಳ್ಳುಗಳ ಬಗ್ಗೆ ಸತ್ಯ ತಿಳಿಸಬೇಕಾದ ಬದ್ಧತೆಯನ್ನು ಯುವ ಕಾರ್ಯಕರ್ತರು ಹೊಂದಬೇಕು ಎಂದರು.
ಜಾಲತಾಣ ಬಳಸಿ: ರಾಜ್ಯ ಸಾಮಾಜಿಕ ಜಾಲತಾಣ ಉಸ್ತುವಾರಿ ನಟರಾಜ್‌ಗೌಡ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಾಮಾಜಿಕ ಸ್ಥಿತ್ಯಂತರಕ್ಕೆ ಕಾರಣವಾಗಿದ್ದು, ಪ್ರಧಾನಿಯವರು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣವನ್ನು ಅಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಸುಳ್ಳುಗಳಿಗೆ ಕೊನೆಗಾಣಿಸಬೇಕಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಮಂಜುನಾಥ್ ಅದ್ದೆ ಮಾತನಾಡಿ, 2013ರಲ್ಲಿ ಬಿಜೆಪಿ ಪರ ಸಂಘಟನೆಗಳು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿದ್ದರಿಂದ ಶೇ.30ರಷ್ಟು ಮತಗಳ ಮೇಲೆ ಪ್ರಭಾವ ಬೀರಿತು ಎನ್ನುವುದು ಸಂಶೋಧನೆಯಿಂದ ಬೆಳಕಿಗೆ ಬಂದಿದೆ. ರಾಜೀವ್‌ಗಾಂಧಿ ಜಾರಿಗೆ ತಂದ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸುವುದು ಹೇಗೆ ಎನ್ನುವುದನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಮಹತ್ವದಾಗಿದೆ ಎಂದು ತಿಳಿಸಿದರು.
ದಿನಕ್ಕೆ 40 ಮಂದಿ ತಲುಪಬಹುದು: ಇಂದು ಜಗತ್ತು ಅಂಗೈನಲ್ಲಿಯೇ ಇದೆ. ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಯೊಬ್ಬರು ದಿನಕ್ಕೆ ನಲ್ವತ್ತು ಮಂದಿಯನ್ನು ತಲುಪಬಹುದಾಗಿದ್ದು, ಸಾಮಾಜಿಕ ಜಾಲತಾಣಗಳನ್ನು ಬಳಸಬೇಕಾದ ಅವಶ್ಯಕತೆ ಇಂದು ರಾಜಕೀಯ ಪಕ್ಷಗಳಿಗಿದ್ದು, ಎಲ್ಲ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಟೂಡ ಮಾಜಿ ಅಧ್ಯಕ್ಷ ಸಿ.ಶಿವಮೂರ್ತಿ, ಆರ್.ರಾಜೇಂದ್ರ, ಮುರುಳೀಧರ ಹಾಲಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ರುದ್ರೇಶ್, ನಿರಂಜನ್, ತು.ಬಿ.ಮಲ್ಲೇಶ್, ರಾಯಸಂದ್ರ ರವಿಕುಮಾರ್, ನಯಾಜ್ ಅಹ್ಮದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.