Advertisement
ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಭೀಕರತೆ ಬಗ್ಗೆ ತಜ್ಞರ ಸಮಿತಿ ಮುಂಚಿತವಾಗಿ ಎಚ್ಚರಿಸಿದ್ದರೂ ಸಹ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಲಕ್ಷé ವಹಿಸಿದ್ದರಿಂದ ಸಾವು- ನೋವು ಉಂಟಾಯಿತು. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮೂರನೇ ಅಲೆ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕು. ದೇಶದಲ್ಲಿ 135 ಕೋಟಿ ಜನಸಂಖ್ಯೆಯಿದ್ದು, ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಸಾಧ್ಯವಾಗಿಲ್ಲ, ಲಸಿಕೆ ಉತ್ಪಾದನೆ ಸಂಸ್ಥೆಗೆ ಮುಂಗಡ ಹಣ ನೀಡದಿರುವುದರಿಂದ ಲಸಿಕೆ ಪೂರೈಕೆಯಲ್ಲಿ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿಲಸಿಕೆ ವಿತರಣೆ ವಿಳಂಬವಾಗುತ್ತಿದ್ದು ಲಸಿಕೆ ವಿತರಣೆಗೆ ವೇಗ ಮುಟ್ಟಿಸಬೇಕೆಂದು ಒತ್ತಾಯಿಸಿದರು.
Related Articles
Advertisement
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ ಇಡೀ ದೇಶವನ್ನು ರಾಮರಾಜ್ಯ ಮಾಡುತ್ತೇವೆ. ಎಲ್ಲಾ ಕ್ಷೇತ್ರಗಳಲ್ಲೂ ಸುಧಾರಣೆ ತರುತ್ತೇವೆ ಎಂದು ಜನತೆಗೆ ಮಾತು ನೀಡಿದ್ದರು. ಬಿಜೆಪಿ ಸರ್ಕಾರ ನೀಡಿದ ಭರವಸೆ ಸುಳ್ಳಾಗಿದೆ. ವಿದೇಶದಲ್ಲಿ ಇಟ್ಟಿರುವ ಕಪ್ಪುಹಣ ಹಾಗೂ ದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಹಣವನ್ನು ತಂದು ಬಡವರಿಗೆ ನೀಡುತ್ತೇವೆಂದು ಭರವಸೆ ನೀಡಿದ್ದರು. ದೇಶದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಹೇಳಿದ್ದರು. ಈ ಯಾವ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ದೂರಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ| ಕೆ.ಪಿ. ಅಂಶುಮಂತ್, ಎ.ಎನ್. ಮಹೇಶ್, ಮಹಮದ್ ನಯಾಜ್, ಹಿರೇಮಗಳೂರು ಪುಟ್ಟಸ್ವಾಮಿ, ಸಂತೋಷ್ ಇದ್ದರು.
ಲಾಕ್‌ಡೌನ್‌ನಿಂದ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಇತರೆ ಸಮುದಾಯದವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಅವರ ನೆರವಿಗೆ ಧಾವಿಸದಿರುವುದರಿಂದ ಬದುಕು ಕಷ್ಟವಾಗಿದೆ. ನನ್ನ ಕ್ಷೇತ್ರದಲ್ಲಿ ನನ್ನ ಇತಿಮಿತಿಯಲ್ಲಿ ನೆರವು ನೀಡಿದ್ದೇನೆ.
ಬಿಜೆಪಿ ಜನಪ್ರತಿನಿಧಿಗಳು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ಜಿಲ್ಲಾಧಿಕಾರಿ ಕಚೇರಿ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿರುವುದು ಸರಿ ಇದೆ. ಜನಪ್ರತಿನಿಧಿ ಗಳನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕು. ಸರ್ವಾಧಿಕಾರಿ ಧೋರಣೆ ಸರಿಯಲ್ಲ.-ಟಿ.ಡಿ. ರಾಜೇಗೌಡ, ಶಾಸಕ