Advertisement

ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಿದ್ಧರಾಗಿ

12:59 PM Sep 06, 2020 | Suhan S |

ನಾಗಮಂಗಲ: ರಾಷ್ಟ್ರೀಯ ಶಿಕ್ಷಣ ನೀತಿ ಅನಿಷ್ಠಾನಗೊಳಿಸಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಶ್ರಮಿಸಲು ಶಿಕ್ಷಕರು ಸಿದ್ಧರಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎನ್‌.ಅಪ್ಪಾಜಿಗೌಡ ತಿಳಿಸಿದರು.

Advertisement

ಪಟ್ಟಣದ ಡಾ.ಅಂಬೇಡ್ಕರ್‌ ಭವನದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿ, ಮೈಸೂರು ವಿವಿಯಲ್ಲಿ ತತ್ವಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಕ ವೃತ್ತಿಯನ್ನು ಬಹಳ ಇಷ್ಟಪಟ್ಟು ಆಯ್ಕೆ ಮಾಡಿಕೊಂಡಿದ್ದರು ಎಂದರು. ಶಿಕ್ಷಕರಿಗೆ ಸಮಾಜದ ಆರೋಗ್ಯವನ್ನು ಕಾಪಾಡುವ ಜವಾಬ್ದಾರಿಯಿದೆ. ಹೆಚ್ಚು ಕೆಲಸ ಮಾಡುವ ಸಾಮರ್ಥ್ಯ ಹೊಂದಿರುವ ಮಕ್ಕಳನ್ನು ತಯಾರು ಮಾಡಿ, ಅವರಲ್ಲಿ ಜ್ಞಾನ ಸಂಪಾದಿಸಿ ಆರೋಗ್ಯಕರ ಸಮಾಜಸೃಷ್ಟಿಸಬೇಕು. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬ ಶಿಕ್ಷಕರೂ ಮೈಗೂಡಿಸಿಕೊಳ್ಳಬೇಕು ಎಂದರು.

ಶಾಸಕ ಸುರೇಶ್‌ಗೌಡ ಮಾತನಾಡಿದರು. ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಗದೀಶ್‌, ತಾಪಂ ಅಧ್ಯಕ್ಷ ದಾಸೇಗೌಡ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮುತ್ತಣ್ಣ, ತಹಶೀಲ್ದಾರ್‌ ಕುಂಞ ಅಹಮ್ಮದ್‌, ತಾಪಂ ಇಒ ಎಂ.ಆರ್‌. ಅನಂತರಾಜು, ತಾಪಂ ಸದಸ್ಯ ಗಿರೀಶ್‌, ಕ್ಷೇತ್ರ ಸಮನ್ವಯಾಧಿಕಾರಿ ಡಿ.ಕುಮಾರ್‌, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್‌, ತಾಲೂಕು ಸರ್ಕಾರಿನೌಕರರ ಸಂಘದ ಅಧ್ಯಕ್ಷ ಸಿ.ಜೆ.ಕುಮಾರ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next