Advertisement

ಮುಂದಿನ ಚುನಾವಣೆ ಎದುರಿಸಲು ಸನ್ನದ್ಧರಾಗಿ: ಪಕ್ಷದ ಮುಖಂಡರಿಗೆ ಕರೆ ನೀಡಿದ ಸಿಎಂ ಬಿಎಸ್ ವೈ

12:11 PM Jun 26, 2021 | Team Udayavani |

ಬೆಂಗಳೂರು: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಳೆಯಿಂದ ಉಂಟಾದ ಪ್ರವಾಹ, ಕೋವಿಡ್ ಪರಿಸ್ಥಿತಿ, ಹಾಗೂ ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗೆ ನಾವು ಸಿದ್ದರಾಗಬೇಕು. ಉಪಚುನಾವಣೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷದ ಮುಖಂಡರಿಗೆ ಕರೆ ನೀಡಿದರು.

Advertisement

ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಸಿಎಂ, ಕೋವಿಡ್ ನಿಂದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಆದರೂ ಸರ್ಕಾರದಿಂದ ಆರ್ಥಿಕ ಸಂಕಷ್ಟಕ್ಕೊಳಗಾದವರಿಗೆ ವಿಶೇಷ ಪರಿಹಾರ, ಕೋವಿಡ್ ನಿಂದ ಮೃತಪಟ್ಟವರಿಗೆ ಒಂದು ಲಕ್ಷ ಪರಿಹಾರ, ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಬಾಲಸೇವೆ ಯೋಜನೆ ತಂದಿದ್ದೇವೆ. ಕೇಂದ್ರದ ಸಹಕಾರದೊಂದಿಗೆ ಸರ್ಕಾರ ಕೋವಿಡ್ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದೆ ಎಂದರು.

ಇದನ್ನೂ ಓದಿ:ಜಾರಕಿಹೊಳಿ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ, ಸೂಕ್ತ ಸ್ಥಾನಮಾನ ಸಿಗಲಿದೆ: ಬಿ.ಸಿ.ಪಾಟೀಲ್

ಹಂತ ಹಂತವಾಗಿ ಅನ್ ಲಾಕ್ ಮಾಡುವ ಮೂಲಕ ಜನ ಸಾಮಾನ್ಯರ ಜೀವನಕ್ಕೆ ಅವಕಾಶ ಮಾಡಿಕೊಡಲಾಗಿದೆ. ರಾಜ್ಯದಲ್ಲಿ‌ ಲಸಿಕಾ ಉತ್ಸವ ಕೂಡ ಯಶಸ್ವಿಯಾಗಿದೆ. ಇದು ಕೂಡ ಒಂದು ಐತಿಹಾಸಿಕ ದಾಖಲೆಯಾಗಿದೆ. ಲಸಿಕೆಯಲ್ಲಿ ರಾಜ್ಯವೂ ರಾಷ್ಟ್ರದಲ್ಲಿ ಎರಡನೇ ಸ್ಥಾನದಲ್ಲಿರುವುದು ಸಂತೋಷದ ಸಂಗತಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಕ್ಷ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖಂಡರು ಭಾಗವಹಿಸಿದ್ದರು. ದೆಹಲಿಯಿಂದ ವರ್ಚುವಲ್ ಮೂಲಕ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next