Advertisement
ವಿದ್ಯಾರ್ಹತೆ: ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಪಿಯುಸಿ ಉತ್ತೀರ್ಣರಾಗಿರಬೇಕು. ಸಾಮಾನ್ಯ ವರ್ಗದವರಿಗೆ 19-25 ವರ್ಷ, ಪರಿಶಿಷ್ಟ ಜಾತಿ/ ಪಂಗಡದವರಿಗೆ 19-27 ವರ್ಷ ಮತ್ತು ಬುಡಕಟ್ಟು ಜನಾಂಗದವರಿಗೆ 19-30 ವರ್ಷವೆಂದು ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Related Articles
Advertisement
ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಕೆಗೆ 12-07-21 ಕೊನೇ ದಿನ. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಗೆ 14-07- 21 ಕೊನೇ ದಿನವಾಗಿದೆ. ಪರೀಕ್ಷೆ ನಡೆಯುವ ದಿನಾಂಕವನ್ನು ಪೊಲೀಸ್ ಇಲಾಖೆ ವೆಬ್ ಸೈಟ್ https://recruitment.ksp.gov.in ನಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ ಅನ್ನು ದಿನವೂ ನೋಡಲು ತಿಳಿಸಲಾಗಿದೆ. ಲಿಖೀತ ಪರೀಕ್ಷೆ ದಿನಾಂಕ, ಸಮಯ ಮತ್ತು ಸ್ಥಳದ ವಿವರ ಹೊಂದಿದ ಪ್ರವೇಶ ಕರೆ ಪತ್ರವನ್ನು ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಅಂಚೆ ಮೂಲಕ ಕಳುಹಿಸಲಾಗುವುದಿಲ್ಲ. ಹೀಗಾಗಿ ಲಿಖೀತ ಪರೀಕ್ಷೆಯ ಕರೆ ಪತ್ರವನ್ನು https://recruitment.ksp.gov.in ವೆಬ್ ಸೈಟ್ ನಿಂದ ಪಡೆದುಕೊಳ್ಳಬೇಕು.
ಲಿಖಿತ ಪರೀಕ್ಷೆಯ ಪಠ್ಯಕ್ರಮ :
ಸಾಮಾನ್ಯ ಜ್ಞಾನ, ಭಾರತ ಸಂವಿಧಾನ, ಇತಿಹಾಸ – ಭಾರತ ಮತ್ತು ಕರ್ನಾಟಕ, ಭೂಗೋಳ – ಭಾರತ ಮತ್ತು ಕರ್ನಾ ಟಕ, ವಿಜ್ಞಾನ ಮತ್ತು ತಂತ್ರಜ್ಞಾನ, ಭಾರ ತದ ಸ್ವಾತಂತ್ರ್ಯ ಸಂಗ್ರಾಮ, ಭಾರತದ ಆಡಳಿತ. ಅರ್ಥಶಾಸ್ತ್ರ, ನೀತಿ ಶಿಕ್ಷಣ, ಪ್ರಚಲಿತ ವಿದ್ಯಮಾನಗಳು- ಈ ವಿಷಯಗಳಿಗೆ ಸಂಬಂಧಿಸಿದ ಪಠ್ಯಕ್ರಮ ವನ್ನು ಲಿಖೀತ ಪರೀಕ್ಷೆ ಹೊಂದಿರುತ್ತದೆ.
ಯಶಸ್ಸು ಗಳಿಸಲು ಹೀಗೆ ಮಾಡಿ :
5-6 ವರ್ಷಗಳ ಹಿಂದಿನ ಪೊಲೀಸ್ ಕಾನ್‌ಸ್ಟೆàಬಲ್ ಹುದ್ದೆಗಳಿಗೆ ನಡೆದ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಇಟ್ಟುಕೊಂಡು ಅದರ ಪ್ರಕಾರವೇ ಅಭ್ಯಾಸ ಮಾಡಿದರೆ ಯಶಸ್ಸು ಪಡೆಯಲು ಸಾಧ್ಯ. ಕೆಲವೊಮ್ಮೆ 2-3 ವರ್ಷಗಳ ಹಿಂದಿನ ಪ್ರಶ್ನೆಗಳು ರಿಪೀಟ್ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವುದು ಅಗತ್ಯ. ದಿನವೂ ತಪ್ಪದೆ ಪೇಪರ್ ಓದುವ ಮೂಲಕ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅಪ್‌ಡೇಟ್ ಆಗುತ್ತಿರಿ. ಕನ್ನಡ, ವಿಜ್ಞಾನ, ಸಮಾಜ ವಿಜ್ಞಾನದಲ್ಲಿ ಹೆಚ್ಚಿನ ಜ್ಞಾನ ಸಂಪಾದನೆಗೆ 6ನೇ ತರಗತಿಯಿಂದ 10ನೇ ತರಗತಿವರೆಗಿನ ಶಾಲಾ ಪಠ್ಯ ಪುಸ್ತಕಗಳನ್ನು ಓದಬೇಕು. ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗೆ ನಡೆಯುವ ಪರೀಕ್ಷೆಯಲ್ಲಿ ಯಶಸ್ಸು ಪಡೆಯುವುದು ಹೇಗೆಂದು ವಿವರಿಸುವ ಗೈಡ್‌ಗಳು, ಪ್ರಶ್ನೆ ಪತ್ರಿಕೆಗಳ ಸೆಟ್‌ಗಳು ಸಿಗುತ್ತವೆ. ಅವನ್ನು ಓದಿ. ಈಗಾಗಲೇ ಪೊಲೀಸ್ ಆಗಿರುವ ಸ್ನೇಹಿತರು ಇದ್ದರೆ ಅವರಿಂದ ಅಥವಾ ತರಬೇತಿ ಕೇಂದ್ರಗಳಲ್ಲಿ ಓದುತ್ತಿರುವ ಸ್ನೇಹಿತರೊಂದಿಗೆ ಚರ್ಚಿಸಿ ಸಲಹೆ ಪಡೆದುಕೊಳ್ಳಿ.