Advertisement

ಕೋವಿಡ್‌ ಆಸ್ಪತ್ರೆ ತೆರೆಯಲು ಸಿದ್ಧರಾಗಿ

10:17 AM Aug 05, 2020 | Suhan S |

ಕೆ.ಆರ್‌.ನಗರ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 3ನೇ ಕೋವಿಡ್‌ ಆಸ್ಪತ್ರೆಯನ್ನು ಪ್ರಾರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಚಿದಂಬರ್‌ ಹೇಳಿದರು.

Advertisement

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷಿಸಿದ ನಂತರ ತಾಲೂಕು ಆರೋಗ್ಯಾಧಿಕಾರಿ ಡಾ.ಕೆ. ಆರ್‌.ಮಹೇಂದ್ರಪ್ಪ ಅವರಿಗೆ ನಿರ್ದೇಶನ ನೀಡಿದರು.

ಸೂಕ್ತ ಚಿಕಿತ್ಸೆ ನೀಡಲು ಕ್ರಮ: ಈಗಾಗಲೇ ಪಟ್ಟಣದ ಹೊರ ವಲಯದಲ್ಲಿರುವ ಕಾಳೇನಹಳ್ಳಿ ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಪ್ರಾರಂಭಿಸಿರುವ 60 ಹಾಸಿಗೆಗಳ ಕೋವಿಡ್‌ ಆಸ್ಪತ್ರೆಯಲ್ಲಿ 25 ಸೋಂಕಿತರನ್ನು ದಾಖಲು ಮಾಡಿಕೊಳ್ಳಲಾಗಿದೆ. ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಂಭವವಿರುವುದರಿಂದ ಅವರಿಗೆ ಸೂಕ್ತವಾದ ಚಿಕಿತ್ಸೆ ನೀಡಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ನಾಗೇಂದ್ರ, ವೈದ್ಯ ಡಾ.ಕಮಲೇಶ್‌, ಹಿರಿಯ ಆರೋಗ್ಯ ಸಹಾಯಕ ಕೆ.ವಿ.ರಮೇಶ್‌, ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ಸಿಬ್ಬಂದಿ ರೇಖಾ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next