ದೊಡ್ಡಬಳ್ಳಾಪುರ: ತಾಲೂಕಿನ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳು ಸುತ್ತಮುತ್ತಲ ಕೆರೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಿದರೆ ಹೆಚ್ಚಿನಪ್ರಮಾಣದಲ್ಲಿ ಕೆರೆಗಳ ಪುನಃಶ್ಚೇತನ ಸಾಧ್ಯ ಎಂದು ಜಿಲ್ಲಾ ಅಧಿಕಾರಿ ಸಿ.ಎಸ್.ಕರೀಗೌಡ ಅವರು ಹೇಳಿದರು.ತಾಲೂಕಿನ ಮಜರಾಹೊಸಹಳ್ಳಿ, ದೊಡ್ಡ ತುಮಕೂರು ಕೆರೆಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೆರೆಗಳ ಪುನಃಶ್ಚೇತನ: ಜಿಲ್ಲೆಯಲ್ಲಿ 25ಕೆರೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಸಾರ್ವಜನಿಕರ ಹಾಗೂ ಜಿಲ್ಲೆಯಲ್ಲಿ ನ ವಿವಿಧ ಕೈಗಾರಿಕೆಗಳ ವತಿಯಿಂದ ಕೆರೆಗಳ ಅಭಿವೃದ್ದಿಗೆ ಉತ್ತಮ ಸಹಕಾರ ದೆರೆಯುತ್ತಿದೆ. ಕೆರೆಗಳ ಪುನಃಶ್ಚೇತನದಿಂದ ಅಂತರ್ಜಲವೃದ್ಧಿಗೆ ಸಹಕಾರಿಯಗುತ್ತದೆ. ಈ ಬಗ್ಗೆ ಕಾರ್ಖಾನೆ ಮಾಲಿಕರಿಗೆ ಮನವರಿಕೆ ಮಾಡಿಕೊಡ ಬೇಕಿದೆ ಎಂದ ಡೀಸಿ,ಸ್ಥಳದಲ್ಲಿ ಹಾಜರಿದ್ದ ರಿಟ್ಟಲ್ ಕಾರ್ಖಾನೆ ಸಿಬ್ಬಂದಿಗೆ ಕಂಪನಿಯಿಂದ ಕೆರೆಗಳ ಪುನಃಶ್ಚೇತನನಕ್ಕೆ ನೆರವು ನೀಡುವಂತೆ ಮನವಿ ಮಾಡಿದರು.
ಹಣ ಕೊಟ್ಟರೂ ನೀರು ಸಿಗಲ್ಲ: ಸರ್ಕಾರವೇ ಎಲ್ಲಾ ಕೆಲಸ ಮಾಡಿಸಲಿ ಎಂದು ಕಾದು ಕುಳಿತುಕೊಳ್ಳುವುದರಲ್ಲಿ ಅರ್ಥವಿಲ್ಲ. ದಶಕಗಳ ಹಿಂದೆ ನಮ್ಮ ಹಿರಿಯರು ಕೆರೆ, ಕುಂಟೆಗಳನ್ನು ನಿರ್ಮಿಸಿಕೊಂಡು ಸೂ ಕ್ತ ವಾಗಿ ನಿ ರ್ವ ಹಣೆ ಮಾಡು ತ್ತಿ ದ್ದ ರು. ಹಾಗಾಗಿ, ಅವರು ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗಿತ್ತು. ಕೆರೆಯಲ್ಲಿ ನೀರು ನಿಂತು ಅಂತರ್ಜಲ ಸೇರುತ್ತಿದ್ದ ಮಳೆ ನೀರು ಇಷ್ಟು ದಿನ ಕೃಷಿ ಮತ್ತು ಕುಡಿಯುವ ನೀರಿಗಾಗಿ ಮಾತ್ರ ಬಳಕೆಯಾಗುತ್ತಿತ್ತು. ಆದರೆ, ಈಗ ಜಿಲ್ಲೆಯಲ್ಲಿ ಸ್ಥಾಪನೆಯಾಗಿರುವ ಕಂಪನಿಗಳು, ಕೈಗಾರಿಕೆಗಳು ಸಹ ಎಲ್ಲಾ ರೀತಿಯ ಬಳಕೆಗೆ ಅಂತರ್ಜಲವನ್ನೇ ಅವಲಂಬಿಸಿವೆ. ಹೀಗಾಗಿ, ಕೆರೆಗಳ ಅಭಿವೃದ್ಧಿಗೆ ಕೈಗಾರಿಕೆ
ಗಳು ಉದಾರವಾಗಿ ಆರ್ಥಿಕ ನೆರವು ನೀಡುವ ಮೂಲಕ ಮಳೆ ನೀರು ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇಲ್ಲವಾದರೆ ಹಣ ನೀಡಿದರೂ ನೀರು ದೊರೆಯದಂತಹ ಭೀಕರ ಪರಿಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಮಳೆ ನೀರು ಸಂಗ್ರಹ ಅಗತ್ಯ: ಅಂತರ್ಜಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಜಿಲ್ಲೆಯಲ್ಲಿನ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಕಟ್ಟಡಗಳು ಸೇರಿದಂತೆ ಮನೆಗಳಲ್ಲಿ ಮಳೆ ನೀರು ಸಂಗ್ರಹ ಮಾಡಿಕೊಳ್ಳುವಂತೆ ಈ ಗಾಗಲೇ ನೋಟಿಸ್ ನೀಡಲಾಗಿದ್ದು, ಈ ಕುರಿತು ಕೈಗಾರಿಕೆಗಳ ವ್ಯವಸ್ಥಾಪಕರ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಹೊಂದಿಕೊಂಡಿರುವ ಚಿಕ್ಕ ತುಮಕೂರು ಬಳಿ ನಿರ್ಮಿಸಲಾಗಿರುವ ನಗರ ಸಭೆ ಒಳಚರಂಡಿ ನೀರು ಶುದ್ಧೀಕ ರಣ ಘಟ ಕದಲ್ಲಿ ನೀರು ಶುದ್ಧೀಕರಿಸದ ಕಾರಣ ಸುತ್ತಮುತ್ತಲ ಗ್ರಾಮಸ್ಥ ರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳ ಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.
ಉಪ ವಿಭಾಗಾಧಿಕಾರಿ ಸಿ. ಮಂಜುನಾಥ್,ಮಜರಾಹೊಸ ಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಚಂದ್ರ ಕಲಾಚಂದ್ರೇ ಗೌಡ, ಗ್ರಾಮದ ಹಿರಿಯ ಮುಖಂಡರಾದ ತಿರಂಗ ರಾಜು, ರಾಮಣ್ಣ, ಆದಿತ್ಯ ನಾಗೇಶ್, ಶಿವ ಕುಮಾರ್, ಮಜರಾಹೊಸ ಹಳ್ಳಿ ಗ್ರಾಪಂ ವ್ಯಾಪ್ತಿಯ ಕೆರೆ ಳ ಅಭಿವೃದ್ಧಿ ಸಂಘದ ಸದಸ್ಯರು, ಗ್ರಾಮಸ್ಥರು ಇದ್ದರು.