Advertisement

1,01,549 ಮಕ್ಕಳಿಗೆ ಲಸಿಕೆ ನೀಡಲು ಸಿದ್ಧರಾಗಿ: ದ.ಕ. ಜಿಲ್ಲಾಧಿಕಾರಿ

01:08 AM Dec 30, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು ಅವರಿಗೆ ಜ. 3ರಿಂದ ಕೋವಿಡ್‌ ಲಸಿಕೆ ನೀಡಲು ಪಟ್ಟಿ ಸಿದ್ಧಪಡಿಸಿ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ತಮ್ಮ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಕೋವ್ಯಾಕ್ಸಿನ್‌ ಮಾತ್ರ ನೀಡಲಾಗುವುದು. ಆಯಾ ಶಾಲೆ-ಕಾಲೇಜುಗಳಲ್ಲಿ ಸ್ಥಳೀಯ ಪ್ರಾ.ಆ.ಕೇಂದ್ರದ ಲಸಿಕಾ ತಂಡದ ಮೂಲಕ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಮಕ್ಕಳ ಕೋವಿಡ್‌ ಲಸಿಕಾಕರಣ ಕುರಿತು ಶಾಲಾ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕ ಸಮಿತಿಯ ಸಭೆ ಕರೆದು ಮಾಹಿತಿ ನೀಡುವಂತೆಯೂ ಸೂಚಿಸಿದರು.

ಜಿ.ಪಂ. ಸಿಇಒ ಡಾ| ಕುಮಾರ್‌, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಡಿಎಚ್‌ಒ ಡಾ| ಕಿಶೋರ್‌ ಕುಮಾರ್‌, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ರಾಜೇಶ್‌, ಡಿಡಿಪಿಐ ಡಾ| ಮಲ್ಲೇಸ್ವಾಮಿ, ಕೋವಿಡ್‌ ನೋಡಲ್‌ ಅಧಿಕಾರಿ ಡಾ| ಅಶೋಕ್‌, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ| ಸುಜಯ್‌, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿದ್ದರು.

ಇದನ್ನೂ ಓದಿ:ದಲಿತರ ರಕ್ಷಣೆಗೆ ಸರಕಾರ ಬದ್ಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Advertisement

ಲಸಿಕೆ: ಜಾಗೃತಿಗೆ ಸೂಚನೆ
ಕೋವಿಡ್‌ ಲಸಿಕೆಯ ಉಪಯುಕ್ತತೆಯ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೂ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ರಮವಿದ್ದು ಈ ಬಗ್ಗೆ ಪ್ರಚಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆಂಜನಪ್ಪ ಅವರಿಗೆ ಸೂಚಿಸಿದರು.

ಬುಧವಾರ ನಡೆದ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮದ್ರಸಾ ಶಿಕ್ಷಣ ಕ್ರಮ ಮತ್ತು ಮದ್ರಸಾಗಳಲ್ಲಿನ ವಾರ್ಷಿಕ ಪರೀಕ್ಷೆಗಳು ಹಾಗೂ ಎಸೆಸೆಲ್ಸಿ ಪರೀಕ್ಷೆಗಳು ಏಕಕಾಲದಲ್ಲಿ ನಡೆಯದಂತೆ ವೇಳಾಪಟ್ಟಿ ಸಿª$œಪಡಿಸಬೇಕು ಹಾಗೂ ಮದ್ರಸಾ ಆಧುನೀಕರಣ ಯೋಜನೆಯ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

ವಿದೇಶಗಳಲ್ಲಿರುವ ಭಾರತೀಯರಿಗೆ ಮತದಾರರ ಗುರುತಿನ ಚೀಟಿಗೆ ಫಾರಂ-6ಎ ಮುಖಾಂತರ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಜಿಲ್ಲಾ ವಕ್ಫ್ ಅಧಿಕಾರಿ ಅಬುಬಕ್ಕರ್‌ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next