Advertisement

ಬಾಲಕಾರ್ಮಿಕ ಪದ್ಧತಿ ತೊಲಗಿಸಿ

06:55 AM Jun 13, 2020 | Lakshmi GovindaRaj |

ಚಿಕ್ಕಬಳ್ಳಾಪುರ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕುರಿತು ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ  ಸಂಘದ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕಾನೂನು ಅರಿವು ಪ್ರಚಾರ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈರಪ್ಪ ಶಿವಲಿಂಗ ನಾಯಿಕ ಹಸಿರು ನಿಶಾನೆ ತೋರಿದರು.

Advertisement

ನಗರದ ಜಿಲ್ಲಾ  ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ದೇಶದ ಸರ್ವಾಂಗೀಣ ಅಭಿವೃದಿಗೆ  ಮಾರಕವಾಗಿರುವುದರಿಂದ ಜೊತೆಗೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗಿರುವುದರಿಂದ ಬಾಲ ಕಾರ್ಮಿಕ ಪದ್ಧತಿ ಆಚರಣೆ ಶಿಕ್ಷಾರ್ಹ ಅಪರಾಧ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್‌. ತಮ್ಮೇಗೌಡ, ರಾಜ್ಯ ವಕೀಲರ ಪರಿಷತ್‌ ಉಸ್ತುವಾರಿ ಸದಸ್ಯ ಶ್ರೀನಿವಾಸ್‌ ಬಿ.ವಿ, ಜಿಲ್ಲಾ ವಕೀಲರ ಸಂಘ ಉಪಾಧ್ಯಾಕ್ಷ ಬಾಲಾಜಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಡಾ.ವಿ.ಅಶೋಕ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ  ಕಾರ್ಯದರ್ಶಿ ಹೆಚ್‌.ದೇವರಾಜು, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವಿನೋದ್‌ ಕುಮಾರ್‌ ಬಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಶ್‌, ಕಾರ್ಮಿಕ ಅಧಿಕಾರಿಗಳಾದ ಆರ್‌.ವರಲಕ್ಷ್ಮೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next