Advertisement

‘ಇವಿಎಂ ತೊಲಗಿಸಿ’ಅಂಚೆಪತ್ರ ಆಂದೋಲನ

01:00 AM Jun 27, 2019 | mahesh |

ಮಹಾನಗರ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ ನೇತೃತ್ವದಲ್ಲಿ ‘ಇವಿಎಂ ತೊಲಗಿಸಿ’ ಆಂದೋಲನ ಬುಧವಾರ ನಡೆಯಿತು. ಬಲ್ಮಠ ರಸ್ತೆಯಲ್ಲಿರುವ ಅಂಚೆ ಕಚೇರಿಯ ಮೂಲಕ ಅಂಚೆ ಪತ್ರಗಳನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಿ ವಿನೂತನವಾಗಿ ಪ್ರತಿಭಟಿಸಲಾಯಿತು.

Advertisement

ದ.ಕ. ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ ಮಾತನಾಡಿ, ಇ.ವಿ.ಎಂ. ಅವ್ಯವಸ್ಥೆಯ ಆಗರವಾಗಿದೆ. ಇ.ವಿ.ಎಂ. ಯಂತ್ರ ಹ್ಯಾಕ್‌ಗೊಳಿಸಿ ತಮಗೆ ಬೇಕಾದ ಅಭ್ಯರ್ಥಿಯ ಪರ ಫಲಿತಾಂಶ ಬರುತ್ತಿದೆ ಎಂಬ ಬಗ್ಗೆ ವ್ಯಾಪಕ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿವೆ. ಹೀಗಾಗಿ ಈ ಸಂಶಯವನ್ನು ಪೂರ್ಣವಾಗಿ ನಿವಾರಿಸಬೇಕಾಗಿದೆ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಇ.ವಿ.ಎಂ. ತೊಲಗಬೇಕು, ಮತಪತ್ರ ಮತ್ತೆ ಜಾರಿಗೆ ಬರಬೇಕು ಎಂದು ಹೇಳಿದರು.

ಪ್ರತಿಭಟನೆಯ ಅಂಗವಾಗಿ ರಾಜ್ಯಾದದ್ಯಂತ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಅಂಚೆ ಪತ್ರಗಳನ್ನು ರಾಷ್ಟ್ರಪತಿಯವರಿಗೆ ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದರು.

ಮೌನ ಪ್ರತಿಭಟನೆಯಲ್ಲಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ ಉಪಾಧ್ಯಕ್ಷೆ ಭಾರತಿ ಬಿ.ಎಂ., ನಗರ ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಂತಲಾ ಗಟ್ಟಿ, ಮಾಜಿ ಕಾರ್ಪೊರೇಟರ್‌ಗಳಾದ ಜೆಸಿಂತಾ ವಿಜಯ, ಅಪ್ಪಿ, ಸಬಿತಾ ಮಿಸ್ಕಿತ್‌, ಅಖೀಲಾ ಆಳ್ವ, ರತಿಕಲಾ ಮತ್ತು ಪ್ರಮೀಳಾ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next