Advertisement

ಹಕ್ಕಿನ ಮೂಲಕ ಸೌಲಭ್ಯ ಪಡೆಯಿರಿ

11:53 AM Sep 11, 2017 | Team Udayavani |

ಬೆಂಗಳೂರು: ಹೈದರಾಬಾದ್‌-ಕರ್ನಾಟಕ ಪ್ರದೇಶದ ಜನರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳು ಹಕ್ಕಿನ ಮೂಲಕ ಪಡೆಯಬೇಕೇ ಹೊರತು, ಸಚಿವರು ಅಧಿಕಾರಿಗಳ ಮನೆಗಳಿಗೆ ಅಲೆಯುವ ಮೂಲಕವಲ್ಲ ಎಂದು ನಿವೃತ್ತ ಪೊಲೀಸ್‌ ಮಹಾ ನಿರ್ದೇಶಕ ಶಂಕರ್‌ ಬಿದರಿ ತಿಳಿಸಿದ್ದಾರೆ. 

Advertisement

ಭಾನುವಾರ ನಗರದ ಗಾಂಧಿಭವನದಲ್ಲಿ ಹೈದರಾಬಾದ್‌-ಕರ್ನಾಟಕ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಘ ಹೈ-ಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೈ-ಕ ಭಾಗವರು ಹಿಂದಿನಿಂದಲೂ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ದೊರೆಯಬೇಕಾದ ಹಕ್ಕುಗಳ ಬಗ್ಗೆ ದನಿ ಎತ್ತದಿರುವುದೇ ಇದಕ್ಕೆ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು. 

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಿದರೆ 30 ಲಕ್ಷ ಹೆಕ್ಟೇರ್‌ ಪ್ರದೇಶವನ್ನು ನೀರಾವರಿಗೆ ಒಳಪಡಿಸಬಹುದು. ಆದರೆ, ಸರ್ಕಾರದ ನಿರ್ಲಕ್ಷ್ಯದಿಂದ  ಅದು ಸಾಧ್ಯವಾಗಿಲ್ಲ. ಹೈ-ಕ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕಿದ್ದ ಕೃಷ್ಣ ಮೇಲ್ದಂಡೆ ಯೋಜನೆಯ ಶೇ.10ರಷ್ಟು ಹಣವನ್ನು ಬೆಂಗಳೂರು ಅಭಿವೃದ್ಧಿಗೆ ಬಳಸಿಕೊಳ್ಳಲಾಗಿದೆ. ಹೀಗಾಗಿ ಈ ಭಾಗದ ಅಭಿವೃದ್ಧಿಗಾಗಿ ಒಗ್ಗಟ್ಟಿನ ಹೋರಾಟ ಮುಖ್ಯ ಎಂದರು. ಸಂಘದ ಅಧ್ಯಕ್ಷ ಸಂಗಮೇಶ ಬಾದವಾಡಗಿ ಮಾತನಾಡಿದರು. 

Advertisement

Udayavani is now on Telegram. Click here to join our channel and stay updated with the latest news.

Next