ಶಿವಮೊಗ್ಗ: ಮಾರಣಾಂತಿಕ ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಎಲ್ಲರೂ ಲಸಿಕೆ ಪಡೆಯುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.
ಅವರು ಭಾನುವಾರ ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿ ಧಿಗಳೊಂದಿಗೆ ಮಾತನಾಡಿದ ಅವರು, ಭಾರತ ಸೇರಿದಂತೆ ಜಗತ್ತಿನ ಅನೇಕ ರಾಷ್ಟ್ರಗಳು ಸಂಕಷ್ಟಕ್ಕೆ ಸಿಲುಕಿವೆ ಮಾತ್ರವಲ್ಲ ಆರ್ಥಿಕವಾಗಿ ನಲುಗಿ ಹೋಗಿವೆ. ಕೆಲವು ರಾಷ್ಟ್ರಗಳು ಅನೇಕ ಸವಾಲುಗಳನ್ನು ಎದುರಿಸಬೇಕಾಗಿರುವುದು ಬೇಸರದ ಸಂಗತಿ ಎಂದರು. ಇಂತಹ ಸಂದಿಗ್ಧ ಸಂದರ್ಭದಲ್ಲಿ ಅನೇಕ ರಾಷ್ಟ್ರಗಳು ಸೋಂಕನ್ನು ನಿಯಂತ್ರಿಸುವ ಲಸಿಕೆ ಕಂಡುಹಿಡಿಯಲು ಅವಿರತವಾಗಿ ಶ್ರಮಿಸಿದವು.
ವಿಶೇಷವಾಗಿ ಭಾರತದಲ್ಲಿ ಅತಿ ಕಡಿಮೆ ಅವ ಧಿಯಲ್ಲಿ ಕಡಿಮೆ ವೆಚ್ಚದ ಔಷಧವನ್ನು ದೇಶದ ಜನತೆಗೆ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಕ್ರಮದ ಮೊದಲ ಹಂತವಾಗಿ ದೇಶದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಾ ಧಿಕಾರಿಗಳು ಮತ್ತು ಸಿಬ್ಬಂದಿಗೆ, ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್‌ಗಳಿಗೆ ಈಗಾಗಲೇ ಮೊದಲ ಹಂತದಲ್ಲಿ ಲಸಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 14,246 ಆರೋಗ್ಯ ಸಿಬ್ಬಂದಿಗೆ ಲಸಿಕೆ ಹಾಕಲಾಗಿದ್ದು ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದರು. ಕಾರ್ಯಕ್ರಮದ ಎರಡನೇ ಹಂತವಾಗಿ 60ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ ವಿವಿಧ ಕಾಯಿಲೆಗಳಿಂದ ಬಾಧಿತರಾಗಿರುವ 45ವರ್ಷ ಮೇಲ್ಪಟ್ಟವರು ತಮ್ಮ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬಹುದಾಗಿದೆ ಎಂದ ಅವರು ಈ ಲಸಿಕೆಯು ಜಿಲ್ಲೆಯ ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ಸ್ಥಳದಲ್ಲಿಯೇ ಹೆಸರು ನೋಂದಾಯಿಸಿ ಲಸಿಕೆ ಪಡೆಯಬಹುದಾಗಿದೆ ಎಂದರು.
ಮುಂದಿನ ಕೆಲವೇ ದಿನಗಳಲ್ಲಿ ದೇಶದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಲಸಿಕೆ ತಲುಪಿಸಲು ಯತ್ನಿಸಲಾಗುವುದು ಎಂದ ಅವರು ಜಿಲ್ಲೆಯಲ್ಲಿ ಲಸಿಕೆ ವಿತರಿಸುವಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿ ಕಾರಿಗಳ ಶ್ರಮ ಶ್ಲಾಘನೀಯ ಎಂದರು. ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆಗಳಲ್ಲೊಂದಾಗಿರುವ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಯತ್ನಿಸಲಾಗಿದ್ದು, ಈ ಸಂಬಂಧ ಇತ್ತೀಚಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗಿದ್ದು ಸಚಿವರು ಪೂರಕವಾಗಿ ಸ್ಪಂದಿಸುವುದಾಗಿ ತಿಳಿಸಿದ್ದಾರೆ ಎಂದರು.
ಸೂಡಾ ಅಧ್ಯಕ್ಷ ಎಸ್. ಎಸ್. ಜ್ಯೋತಿ ಪ್ರಕಾಶ್, ಕರ್ನಾಟಕ ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಪ್ರಮುಖರಾದ ವೀರಭದ್ರಪ್ಪ ಪೂಜಾರ್, ಬಳ್ಳೆಕೆರೆ ಸಂತೋಷ್, ದಿವಾಕರ ಶೆಟ್ಟಿ ಇತರರಿದ್ದರು.