ಗೋಕಾಕ: ಶೈಕ್ಷಣಿಕ ಪ್ರಗತಿಗಾಗಿ ಕ್ಷೇತ್ರದಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಂಡು ನಾಡಿಗೆ ಕೀರ್ತಿ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕರೆ ನೀಡಿದರು.
ರವಿವಾರ ನಗರದ ಆಶ್ರಯ ಬಡಾವಣೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ3.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾಗೂ 1 ಕೋಟಿ ರೂ. ವೆಚ್ಚದ ಅಲೆಮಾರಿ/ಅರೆ ಅಲೆಮಾರಿ ಮಕ್ಕಳ ಆಶ್ರಮ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೂಲಭೂತ ಸೌಲಭ್ಯದೊಂದಿಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಲಾಗುತ್ತಿದೆ. ಅಧಿಕಾರಿಗಳು, ಶಿಕ್ಷಕರ ಮತ್ತು ಪಾಲಕರ ಸಹಕಾರದಿಂದ ವಿದ್ಯಾರ್ಥಿಗಳು ಪ್ರತಿಭೆಗಳಾಗಿ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಬೇಕೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ನಗರದ ಪಪೂ ಕಾಲೇಜಲ್ಲಿ 1 ಕೋಟಿ ರೂ. ವೆಚ್ಚದಲ್ಲಿ 6 ಕೊಠಡಿಗಳು ಮತ್ತು 2 ಶೌಚಾಲಯ ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿ.ಪಂ ಸದಸ್ಯರಾದ ಟಿ.ಆರ್.ಕಾಗಲ, ಮಡ್ಡೆಪ್ಪ ತೋಳಿನವರ, ನಗರಸಭಾ ಸದಸ್ಯರಾದ ಎಸ್.ಎ.ಕೋತವಾಲ, ಗಿರೀಶ ಖೋತ, ಜಯಾನಂದ ಹುಣಶ್ಯಾಳ, ಸಿದ್ದಪ್ಪ ಹುಚ್ಚರಾಯಪ್ಪಗೋಳ, ಬಸವರಾಜ ಆರೆನ್ನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ರಾಮನಗೌಡ ಕನ್ನೋಳಿ, ತಾಲೂಕಾಧಿಕಾರಿ ಆರ್.ಕೆ. ಬಿಸಿರೊಟ್ಟಿ, ಬಿಇಒ ಜಿ.ಬಿ.ಬಳಗಾರ, ಪಪೂ ಕಾಲೇಜು ಪ್ರಾಚಾರ್ಯ ಎ.ವೈ. ಹಾದಿಮನಿ, ಮುಖಂಡರಾದ ಅಶೋಕ ಪಾಟೀಲ, ಆಯ್ .ವಿ.ಕೌತನಾಳಿ, ಶಂಕರ ಧರೆನ್ನವರ, ಸಿದ್ದಲಿಂಗ ದಳವಾಯಿ, ಮಹಾಂತೇಶ ತಾವಂಶಿ, ಅಮƒತ ದಪ್ಪಿನವರ, ದುರ್ಗಪ್ಪ ಶಾಸ್ತಿಗೊಲ್ಲರ, ಸಿದ್ದಾರ್ಥ ಪಾತ್ರೋಟ, ಶಾಮಾನಂದ ಪೂಜೇರಿ ಸೇರಿದಂತೆ ಅನೇಕರು ಇದ್ದರು.