Advertisement

“ಭೂ ಒತ್ತುವರಿದಾರರಿಗೆ ಚುರುಕು ಮುಟ್ಟಿಸುವೆ’

11:22 PM Feb 18, 2020 | Lakshmi GovindaRaj |

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಭೂ ಒತ್ತುವರಿ ಮಾಡಿಕೊಂಡವರು ಹಾಗೂ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವುದಾಗಿ ಭೂ ಒತ್ತುವರಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಎಚ್ಚರಿಕೆ ನೀಡಿದರು. ಸಮಿತಿ ಮೊದಲ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಿ ತಿಯ ಮೊದಲ ಸಭೆ ನಡೆಸಲಾಗಿದ್ದು, ರಾಜ್ಯದಲ್ಲಿ ಎಲ್ಲೆಲ್ಲಿ ಭೂ ಒತ್ತುವರಿ ಆಗಿದೆ ಎನ್ನುವುದನ್ನು ಮಾಹಿತಿ ಕಲೆ ಹಾಕಿ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಗಿದೆ.

Advertisement

ಹೀಗಾಗಿ ಅಕ್ರಮವಾಗಿ ಒತ್ತುವರಿ ಮಾಡಿ ಕೊಂಡ ವರು, ಅವರಿಗೆ ಸಹಕಾರ ನೀಡುತ್ತಿರುವ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡುವುದಾಗಿ ಹೇಳಿದರು.ಸಮಿತಿ ಸದಸ್ಯ ಶಾಸಕ ಎ.ಟಿ.ರಾಮಸ್ವಾಮಿ ಮಾತನಾಡಿ, ಸರ್ಕಾರಿ ಜಮೀನಿಗೆ ಸುಳ್ಳು ದಾಖಲೆ ಸೃಷ್ಟಿ ಮಾಡಿ,ಸರ್ಕಾರಕ್ಕೆ ಸೆಡ್ಡು ಹೊಡೆದು, ಅಪರಾಧ ಕೆಲಸ ಮಾಡಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.

ಜೀವನಕ್ಕಾಗಿ ಒತ್ತುವರಿ ಮಾಡಿದವರ ವಿರುದ್ಧವೇ ಕ್ರಮ ಕೈಗೊಳ್ಳಲಾಗುತ್ತಿದೆ. ದೊಡ್ಡ ದೊಡ್ಡ ಭೂಗಳ್ಳರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅವಿಭಜಿತ ಬೆಂಗಳೂರು ಜಿಲ್ಲೆಯಲ್ಲಿ 7 ಸಾವಿರ ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು ಅದರ ಮೌಲ್ಯ 1 ಲಕ್ಷ ಕೋಟಿಗೂ ಅಧಿಕವಾಗಿದೆ. ಬಲಾಡ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಶಾಸಕ ರಾದ ಎಸ್‌.ಆರ್‌.ವಿಶ್ವನಾಥ, ರಾಜುಗೌಡ, ರಾಜಶೇಖರ ಪಾಟೀಲ್‌ ಹುಮ್ನಾಬಾದ್‌ ಹಾಗೂ ಅರಗ ಜ್ಞಾನೇಂದ್ರ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next