ನವಿಮುಂಬಯಿ: ಶ್ರೀ ಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಶ್ರೀ ಮೂಕಾಂಬಿಕೆ, ಶ್ರೀ ಮಹಾಗಣಪತಿ, ಶ್ರೀ ನಾಗದೇವರ ಮೂರ್ತಿ ಪ್ರತಿಷ್ಠಾಪನೆಯ 16ನೇ ವಾರ್ಷಿಕ ಉತ್ಸವವು ಮಾ. 21ರಂದು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ವಾರ್ಷಿಕ ಉತ್ಸವದ ಅಂಗ ವಾಗಿ ಬೆಳಗ್ಗೆ ಶ್ರೀ ಮೂಕಾಂಬಿಕೆ,ಶ್ರೀ ಮಹಾಗಣಪತಿ, ಶ್ರೀ ನಾಗದೇವರಿಗೆ ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಹಾಪೂಜೆ, ಅನ್ನ
ಸಂತರ್ಪಣೆ ನಡೆಯಿತು. ಸಂಜೆ ಶ್ರೀ ಮೂಕಾಂಬಿಕಾ ಭಜನಾ ಮಂಡಳಿ
ಯವರಿಂದ ಭಜನೆ, ಮಹಾಪೂಜೆ, ವಿಶೇಷ ರಂಗಪೂಜೆ, ಮಹಾ
ಮಂಗಳಾರತಿ ನೆರವೇರಿತು.
ಶ್ರೀ ಕ್ಷೇತ್ರದ ತಂತ್ರಿವರ್ಯರಾದ ವಿದ್ವಾನ್ ರಾಮಚಂದ್ರ ಬಾಯರಿ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಗುರುಪ್ರಸಾದ್ ಭಟ್ ಅವರ ಪೌರೋಹಿತ್ಯದಲ್ಲಿ ಸಹ ಅರ್ಚಕರ ಸಹಕಾರದೊಂದಿಗೆ ಪ್ರತಿಷ್ಠಾಪನಾ ದಿನದ ದೇವತಾ ಕಾರ್ಯಗಳು ಜರಗಿದವು.
ಶ್ರೀ ಮೂಕಾಂಬಿಕಾ ಕ್ಷೇತ್ರದ ಉಪಾಧ್ಯಕ್ಷರಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ್ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಸಮಿತಿಯ ಸದಸ್ಯರಾದ ರಾಘು ಆರ್.ಕೋಟ್ಯಾನ್, ಕುಟ್ಟಿ ಎ. ಕುಂದರ್, ಶಂಕರ್ ಜಿ. ಮೊಲಿ, ಸುಧಾಕರ ಸಿ. ಪೂಜಾರಿ, ಮಹಾಬಲ ಟಿ. ಶೆಟ್ಟಿ, ಹರೀಶ್ ಶೆಟ್ಟಿ ಕುರ್ಕಾಲ್, ಹರೀಶ್ ಶೆಟ್ಟಿ ಪಡುಬಿದ್ರೆ, ಹರೀಶ್ ಶೆಟ್ಟಿ ನಲ್ಲೂರು, ಶಕುಂತಳಾ ಎಸ್. ಶೆಟ್ಟಿ ಹಾಗೂ ದೇವಾಲಯದ ಸಹ ಸಂಸ್ಥೆ ಗಳಾದ ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.