ನವಿಮುಂಬಯಿ, ಅ. 11: ಶ್ರೀ ಕ್ಷೇತ್ರ ಘನ್ಸೋಲಿಯ ಶ್ರೀ ಮೂಕಾಂಬಿಕಾ ಮಂದಿರದಲ್ಲಿ 47ನೇ ವಾರ್ಷಿಕ ನವರಾತ್ರಿ ಉತ್ಸವವು ಸೆ. 29ರಿಂದ ಅ. 8ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಿತು.
ದೇವಾಲಯದ ತಂತ್ರಿಗಳಾದ ವಿದ್ವಾನ್ ರಾಮಚಂದ್ರ ಬಾಯಾರ್ ಮತ್ತು ಪ್ರಧಾನ ಅರ್ಚಕ ಗುರುಪ್ರಸಾದ್ ವಿ. ಭಟ್ ಇವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಅ. 7ರಂದು ಮುಂಜಾನೆ ಉಷಾಕಾಲ ಪೂಜೆ, ಸ್ವಸ್ತಿಪುಣ್ಯಾಹವಾಚನ, ದುರ್ಗಾಹೋಮ, ಪೂರ್ವಾಹ್ನ ಹೋಮದ ಪೂಜೆ ಪೂರ್ಣಾಹುತಿ, ಶ್ರೀ ದೇವಿಗೆ ಕಲಶಾಭಿಷೇಕ, ಅಲಂಕಾರ, ಮಧ್ಯಾಹ್ನ 12ರಿಂದ ಮಹಾಪೂಜೆ, ಪಲ್ಲಪೂಜೆ, ಮಧ್ಯಾಹ್ನ 12.30ರಿಂದ ಭಕ್ತಿ ಸಂಗೀತ ಕಾರ್ಯಕ್ರಮ, ಮಧ್ಯಾಹ್ನ 1ರಿಂದ ಸಾರ್ವಜನಿಕ ಅನ್ನಪ್ರಸಾದ ವಿತರಣೆ, ಸಂಜೆ 5ರಿಂದ ಭರತನಾಟ್ಯ, ಸಂಜೆ 6ರಿಂದ ಬಿಲ್ಲವರ ಅಸೋಸಿಯೇಶನ್ ನವಿಮುಂಬಯಿ ಸಮಿತಿಯಿಂದ ಭಜನೆ, ರಾತ್ರಿಮಹಾಪೂಜೆ, ಸರ್ವ ಸೇವಾ ಪೂಜೆ ಆರಂಭ, ಭಜನೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.
ಅ.8ರಂದು ಮುಂಜಾನೆಯಿಂದ ಉಷಾಕಾಲ ಪೂಜೆ, ನಿತ್ಯಮಹಾಪೂಜೆ, ಅಕ್ಷರಾಭ್ಯಾಸ, ವಾಹನ ಪೂಜೆ, ಮಧ್ಯಾಹ್ನ ಪೂಜೆ, ಅನ್ನಸಂತರ್ಪಣೆ, ಸಂಜೆ 4ರಿಂದ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ಮಹಾಪೂಜೆ, ಸಂಜೆ 6ರಿಂದ ಶ್ರೀ ಮೂಕಾಂಬಿಕಾ ಭಜನ ಮಂಡಳಿಯವರಿಂದ ಭಜನೆ, ರಾತ್ರಿ ಮಹಾಪೂಜೆ, ಸರ್ವಸೇವಾರಂಭ, ರಾತ್ರಿ 9ರಿಂದ ದೇವಿಗೆ ವಿಶೇಷ ರಂಗಪೂಜೆ, ಪಲ್ಲಕ್ಕಿಯಲ್ಲಿ ಸಪ್ತಸತಿ ಪುಸ್ತಕದ ಮೆರವಣಿಗೆ, ಭಜನೆ, ಮಂಗಳ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು. ದಿನಂಪ್ರತಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು. ಪ್ರತೀ ದಿನ ವಿವಿಧ ಪೂಜಾ ಕೈಂಕರ್ಯಗಳು, ಸೇವಾ ಪೂಜೆಗಳು, ಭಜನ ಕಾರ್ಯಕ್ರಮವಲ್ಲದೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ದೇವಾಲಯದ ಅಧ್ಯಕ್ಷರಾದ ಧರ್ಮದರ್ಶಿ ಅಣ್ಣಿ ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಈ ಉತ್ಸವದಲ್ಲಿ ಮಂದಿರದ ಉಪಾಧ್ಯಕ್ಷರಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ ಪಿ. ಶೆಟ್ಟಿ, ಸದಸ್ಯರಾದ ರಾಘು ಆರ್. ಕೋಟ್ಯಾನ್, ಕುಟ್ಟಿ ಎ. ಕುಂದರ್, ಶಂಕರ್ ಮೊಲಿ, ಸುಧಾಕರ ಸಿ. ಪೂಜಾರಿ, ವಿಶ್ವನಾಥ ಎಸ್. ಶೆಟ್ಟಿ, ಅಣ್ಣು ಎಂ. ಶೆಟ್ಟಿ, ಶ್ರೀಧರ ಬಿ. ಪೂಜಾರಿ, ಮಹಾಬಲ ಟಿ. ಶೆಟ್ಟಿ, ಹರೀಶ್ ಕುರ್ಕಾಲ್, ಹರೀಶ್ ಪಡುಬಿದ್ರೆ, ಶಕುಂತಳಾ ಎಸ್. ಶೆಟ್ಟಿ ಮತ್ತು ಶ್ರೀ ಮೂಕಾಂಬಿಕ ಧರ್ಮಶಾಸ್ತ ಸೇವಾ ಸಂಸ್ಥೆ, ಉಪಸಮಿತಿಯ ಸದಸ್ಯರು ಹಾಗೂ ಮಹಿಳಾ ಮಂಡಳಿಯ ಸದಸ್ಯೆಯರು ಸಹಕರಿಸಿದರು.
ಚಿತ್ರ-ವರದಿ : ಸುಭಾಷ್ ಶಿರಿಯಾ