ನವಿಮುಂಬಯಿ: ಘನ್ಸೋಲಿಯ ಶ್ರೀ ಮೂಕಾಂಬಿಕಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆ. 14 ರಂದು ನಡೆಯಿತು. ಸಂಜೆ ದೇವಾಲಯದ ಸದಸ್ಯ ಬಾಂಧವರ ಮಕ್ಕಳಿಂದ ಶ್ರೀಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಲಾಯಿತು. ರಾತ್ರಿ 8ರಿಂದ ಶ್ರೀ ಮೂಕಾಂಬಿಕಾ ಭಜನ ಮಂಡಳಿಯವರಿಂದ ಭಜನೆ, ರಾತ್ರಿ 10ರಿಂದ ಕುಣಿತ ಭಜನೆ ನಡೆಯಿತು. ಚಂದ್ರೋದಯಕ್ಕೆ ಶ್ರೀ ಕೃಷ್ಣ ದೇವರಿಗೆ ಅಘÂì ಅರ್ಪಣೆ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ಇತ್ಯಾದಿ ಕಾರ್ಯಕ್ರಮಗಳು ಜರಗಿದವು.
ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮಾತೋಶ್ರೀ ದಿ| ದೇವಕಿ ಸಿ. ಶೆಟ್ಟಿ ಅವರ ಸ್ಮರಣಾರ್ಥ ಮಹಾಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು. ಶ್ರೀಕೃಷ್ಣ ದೇವರ ಪೂಜೆಯ ಪೌರೋಹಿತ್ಯವನ್ನು ಅರ್ಚಕ ಗುರುಪ್ರಸಾದ್ ಭಟ್ ಅವರು ವಹಿಸಿದ್ದರು. ಸಹ ಅರ್ಚಕರಾದ ಗುರುರಾಜ್ ಭಟ್, ನಾಗರಾಜ್ ಭಟ್, ಶ್ಯಾಮ್ ಭಟ್ ಮೊದಲಾದವರು ಸಹಕರಿಸಿದರು.
ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಉತ್ಸವದಲ್ಲಿ ಉಪಾಧ್ಯಕ್ಷರಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ ಉಪಸಮಿತಿಯ ಸದಸ್ಯರು, ಮಹಿಳಾ ಮಂಡಳದ ಸದಸ್ಯೆಯರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ನೂರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.