Advertisement
ಫೆ. 9 ರಂದು ಸೂರ್ಯೋದಯಕ್ಕೆ ಕವಾಟ ಉದ್ಘಾಟನೆ, ತೈಲಭ್ಯಂಗ, ಪಂಚಾಮೃತ ಅಭಿಷೇಕ, ದೇವಿಗೆ 49 ಕಲಶಾಭಿಷೇಕ, ಸಹಸ್ರ ನಾಮಾರ್ಚನೆ ಪೂರ್ವಕ ಮಹಾಪೂಜೆ, ಉತ್ಸವ ಬಲಿ, ಪಲ್ಲಪೂಜೆ, ಮಧ್ಯಾಹ್ನ 1 ರಿಂದ ಮಹಾ ಅನ್ನಸಂತರ್ಪಣೆ ನಡೆಯಿತು. ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಅಪರಾಹ್ನ 4 ರಿಂದ ಭಕ್ತಿ ಪ್ರವಚನ, ಶ್ರೀ ಮೂಕಾಂಬಿಕಾ ಮಹಿಳಾ ಮಂಡಳಿಯಿಂದ ಅರಸಿನ ಕುಂಕುಮ, ಸಂಜೆ 5 ರಿಂದ ಸಂಕೀರ್ತನೆ, ಮಹಾಪೂಜೆ, ಮಹಾರಂಗ ಪೂಜೆ, ಉತ್ಸವ ಬಲಿ, ಕಟ್ಟೆಪೂಜೆ, ಅವಭೃತ ಸ್ನಾನ, ಜಲಕದ ಬಲಿ, ಅನ್ನಪ್ರಸಾದ ನಡೆಯಿತು.
Related Articles
Advertisement
ದೇವಾಲಯ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಕಾರ್ಯಕ್ರಮಕ್ಕೆ ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಸಮಿತಿಯ ಸರ್ವ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಳ, ಸದಸ್ಯರು ಹಾಗೂ ಮಹಿಳಾ ಮಂಡಳಿಯ ಸದಸ್ಯೆಯರು ಸಹಕರಿಸಿದರು. ಉತ್ಸವದುದ್ದಕ್ಕೂ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಅತೀ ವೈಭವದಿಂದ ನಡೆಯಲಿದ್ದು, ತುಳು-ಕನ್ನಡಿಗರು, ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಇದೇ ಸಂದರ್ಭದಲ್ಲಿ ತಿಳಿಸಲಾಯಿತು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಂದಿರದ 15ನೇ ವಾರ್ಷಿಕ ಮಹೋತ್ಸವದ ಅಂಗವಾಗಿ ಫೆ. 10ರಂದು ಮುಂಜಾನೆ 6ರಿಂದ ಮಹಾಸಂಪ್ರೋಕ್ಷಣೆ, ಚಂಡಿಯಾ ಯಾಗ, ಮಹಾಪೂಜೆ, ಮಹಾಮಂತ್ರಾಕ್ಷತೆ, ಅನ್ನದಾನ ನಡೆಯಲಿದೆ. ಸಂಜೆ 5ರಿಂದ ದೇವಾಲಯದ ಸದಸ್ಯರು, ತುಳುಕೂಟ ಐರೋಲಿ, ಚಿಣ್ಣರ ಬಿಂಬ, ರಂಗಭೂಮಿ ಫೈನ್‌ಆರ್ಟ್ಸ್ನ ಸದಸ್ಯರಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ. ಸಂಜೆ 6ರಿಂದ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಲಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರುಗಳನ್ನು ಸಮ್ಮಾನಿಸಲಾಗುವುದು. ರಾತ್ರಿ 8ರಿಂದ ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ ಅವರ ನಿರ್ದೇಶನದಲ್ಲಿ ಕಿರು ತುಳು ನಾಟಕ, ರಾತ್ರಿ 9 ರಿಂದ ಅನ್ನಪ್ರಸಾದ, ರಾತ್ರಿ 10ರಿಂದ ದೆಪ್ಪುಣಿಗುತ್ತು ಕುಟುಂಬಸ್ಥರ ಸೇವಾ ರೂಪದಲ್ಲಿ ಶ್ರೀ ಗೀತಾಂಬಿಕಾ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದ ರಿಂದ ಶ್ರೀ ಬಪ್ಪನಾಡು ಕ್ಷೇತ್ರ ಮಹಾತೆ¾ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಇದೇ ಸಂದರ್ಭದಲ್ಲಿ ವಿನಂತಿಸಲಾಯಿತು.
ಚಿತ್ರ-ವರದಿ: ಸುಭಾಷ್ ಶಿರಿಯಾ