Advertisement
Related Articles
Advertisement
ಶ್ರೀ ಕ್ಷೇತ್ರದ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ್ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಸಮಿತಿಯ ಸರ್ವ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಯ ಸದಸ್ಯರು ಹಾಗೂ ಮಹಿಳಾ ಮಂಡಳಿಯ ಸದಸ್ಯೆಯರು ಪಾಲ್ಗೊಂಡು ಸಹಕರಿಸಿದರು.
ಫೆ. 28ರಂದು ಬೆಳಗ್ಗೆ 6ರಿಂದ ಮಹಾಸಂಪ್ರೋಕ್ಷಣೆ, ಚಂಡಿಕಾ ಯಾಗ, ಮಧ್ಯಾಹ್ನ ಮಹಾಪೂಜೆ, ಮಹಾಮಂತ್ರಾಕ್ಷತೆ, ಅನ್ನಪ್ರಸಾದ, ಅಪರಾಹ್ನ 4ರಿಂದ ಕೃತಿ ದಿನೇಶ್ ಚಡಗ ಇವರಿಂದ ಭರತನಾಟ್ಯ ಕಾರ್ಯಕ್ರಮ, ಅಪರಾಹ್ನ 4.30ರಿಂದ ಧಾರ್ಮಿಕ ಸಭೆ, ಸಂಜೆ 5.30ರಿಂದ ಬಾಲಚಂದ್ರ ರೈ ದಂಪತಿ ಹೊಟೇಲ್ ವರುಣ್ ಇವರ ಸೇವಾರ್ಥಕವಾಗಿ ಶ್ರೀ ಗೀತಾಂಬಿಕಾ ಯಕ್ಷಗಾನ ಕಲಾಮಂಡಳಿಯ ಕಲಾವಿದರಿಂದ ಶ್ರೀ ದೇವಿ ಮಹಾತೆ¾ ಯಕ್ಷಗಾನ ಬಯಲಾಟ ನಡೆಯಲಿದೆ. ಆನಂತರ ಅನ್ನಪ್ರಸಾದ ವಿತರಣೆಯಾಗಲಿದೆ.
ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಶ್ರೀ ಕ್ಷೇತ್ರದ ತಂತ್ರಿಗಳಾದ ರಾಮಚಂದ್ರ ಬಾಯರಿ ಆಶೀರ್ವಚನ ನೀಡಲಿದ್ದಾರೆ. ಅತಿಥಿಗಳಾಗಿ ದೇವಾಲಯದ ನೂತನ ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಅಣ್ಣಾವರ ಶಂಕರ ಶೆಟ್ಟಿ, ನೆರೂಲ್ ಶ್ರೀ ಶನೀಶ್ವರ ಮಂದಿರದ ಅಧ್ಯಕ್ಷ ಧರ್ಮದರ್ಶಿ ರಮೇಶ್ ಎಂ. ಪೂಜಾರಿ, ಐರೋಲಿಯ ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ಕೃಷ್ಣ ವಿ. ಶೆಟ್ಟಿ, ನೆರೂಲ್ ಶ್ರೀ ಗಣಪತಿ, ದುರ್ಗಾದೇವಿ ಅಯ್ಯಪ್ಪ ಮಂದಿರದ ಉಪಾಧ್ಯಕ್ಷ ಸುರೇಶ್ ಜಿ. ಶೆಟ್ಟಿ, ನೆರೂಲ್ ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್ ಟ್ರಸ್ಟ್‌ನ ಉಪ ಕಾರ್ಯಾಧ್ಯಕ್ಷ ಪ್ರಭಾಕರ ಹೆಗ್ಡೆ, ಉದ್ಯಮಿ ಪದ್ಮಾ ಭಾಸ್ಕರ್ ಶೆಟ್ಟಿ, ದೇವಾಲಯ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ್ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ, ಉಪಸಮಿತಿಯ ಕಾರ್ಯಾಧ್ಯಕ್ಷ ಪ್ರವೀಣ್ ಕೆ. ಶೆಟ್ಟಿ, ಮಹಿಳಾ ಮಂಡಳಿಯ ಕಾರ್ಯಾಧ್ಯಕ್ಷೆ ವೀಣಾ ಸಿ. ಕರ್ಕೇರ ಅವರು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಸದಸ್ಯರಾದ ಶ್ರೀಧರ ಬಿ. ಪೂಜಾರಿ ಮತ್ತು ಮಹಾಬಲ ಟಿ. ಶೆಟ್ಟಿ ದಂಪತಿಗಳನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.
ಚಿತ್ರ-ವರದಿ : ಸುಭಾಷ್ ಶಿರಿಯಾ