ನವಿ ಮುಂಬಯಿ: ಕಾರಣಿಕ ಕ್ಷೇತ್ರವಾಗಿ ಬಿಂಬಿತಗೊಂಡಿರುವ ಶ್ರೀ ಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದಲ್ಲಿ 46 ನೇ ವಾರ್ಷಿಕ ನವರಾತ್ರಿ ಮಹೋತ್ಸವವು ಅ. 10 ರಂದು ಪ್ರಾರಂಭಗೊಂಡಿದ್ದು, ಅ. 19 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.
ಧಾರ್ಮಿಕ ಕಾರ್ಯಕ್ರಮವಾಗಿ ಬುಧವಾರ ಬೆಳಗ್ಗೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ ಹೋಮ, ದೇವಿಗೆ ಕಲಶಾಭಿಷೇಕ, ಅಲಂಕಾರ ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಮೊಗವೀರ ಸೇವಾ ಸಮಿತಿ ನವಿಮುಂಬಯಿ ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಸಂಜೆ ಪವಿತ್ರಾ ಭಟ್ ಅವರ ಶಿಷ್ಯಂದಿರಿಂದ ಭರತನಾಟ್ಯ, ಸಂಜೆ 6.30 ರಿಂದ ಮಣಿಕಂಠ ಭಕ್ತವೃಂದ ಪನ್ವೆಲ್ ಇವರಿಂದ ಭಜನೆ, ರಾತ್ರಿ ರಂಗಪೂಜೆ, ಮಹಾಪೂಜೆ, ಭಕ್ತಾದಿಗಳ ಸರ್ವ ಸೇವಾ ಪೂಜೆ, ಮಂಗಳಾರತಿ ತೀರ್ಥ ಪ್ರಸಾದ ವಿತರಣೆ, ಅನ್ನಪ್ರಸಾದವನ್ನು ಆಯೋಜಿಸಲಾಗಿತ್ತು. ದೇವಾಲಯದ ತಂತ್ರಿಗಳಾಗದ ವಿದ್ವಾನ್ ರಾಮಚಂದ್ರ ಬಾಯಾರ್ ಮತ್ತು ಪ್ರದಾನ ಅರ್ಚಕ ನಾಗರಾಜ್ ಭಟ್, ಶ್ಯಾಮ್ ಭಟ್, ಅಶೋಕ್ ಭಟ್, ಸುಧೀಂದ್ರ ಭಟ್ ಮೊದಲಾದವರು ಸಹಕರಾದೊಂದಿಗೆ ಪೂಜಾ ಕೈಂಕರ್ಯಗಳು ನೆರವೇರಿತು. ಅ. 19 ರವರೆಗೆ ಪ್ರತೀ ದಿನ ಶ್ರೀ ಕ್ಷೇತ್ರದಲ್ಲಿ ನಿತ್ಯಪೂಜೆ, ಮಧ್ಯಾಹ್ನ ಪೂಜೆ, ಅನ್ನಸಂತರ್ಪಣೆ, ಭಕ್ತಿ ಸಂಗೀತ, ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಸರ್ವ ಸೇವೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿದೆ.
ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗುವ ಉತ್ಸವದಲ್ಲಿ ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ, ಸಮಿತಿಯ ಸದಸ್ಯರುಗಳಾದ ರಾಘು ಆರ್. ಕೋಟ್ಯಾನ್, ಕುಟ್ಟಿ ಎ. ಕುಂದರ್, ಸುಧಾಕರ್ ಸಿ. ಪೂಜಾರಿ, ವಿಶ್ವನಾಥ್ ಎಸ್. ಶೆಟ್ಟಿ, ಅಣ್ಣು ಎಂ. ಶೆಟ್ಟಿ, ಶ್ರೀಧರ ಬಿ. ಪೂಜಾರಿ, ಮಹಾಬಲ ಟಿ. ಶೆಟ್ಟಿ, ಹರೀಶ್ ಶೆಟ್ಟಿ ಕುರ್ಕಾಲ್, ಹರೀಶ್ ಶೆಟ್ಟಿ ಪಡುಬಿದ್ರೆ, ಹರೀಶ್ ಶೆಟ್ಟಿ ನಲ್ಲೂರು, ಶಕುಂತಳಾ ಎಸ್. ಶೆಟ್ಟಿ ಮತ್ತು ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಳಿ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯೆಯರು ಸಹಕರಿಸಲಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಬೆಳಗ್ಗೆ 10.30 ಮತ್ತು ಮಧ್ಯಾಹ್ನ 12 ರ ಪೂಜೆಯವರೆಗೆ ಶ್ರೀದೇವಿಗೆ ವಿಶೇಷ ಅಷೊuàತ್ತರ ಅರ್ಚನೆ, ದೇವಿ ಸಹಸ್ರ ನಾಮಾರ್ಚನೆ ನಡೆಯಲಿದೆ. ದೇವಸ್ಥಾನದಲ್ಲಿ ರಂಗಪೂಜೆ, ದುರ್ಗಾನಮಸ್ಕಾರ, ಹೂವಿನ ಪೂಜೆ, ಸಹಸ್ರನಾಮಾರ್ಚನೆ, ಪಂಚಾಮೃತ ಅಭಿಷೇಕ, ದುರ್ಗಾ ಹೋಮ, ಚಂಡಿಕಾಯಾಗ, ಸರ್ವ ಸೇವೆ, ತೀರ್ಥ ಸ್ನಾನ, ಕ್ಷೀರಪಾಯಸ, ಅಷೊuàತ್ತರ, ಕುಂಕುಮಾರ್ಚನೆ, ಲಕ್ಷಿ¾àಫಲ, ಗುಡಾನ್ನನೈವೇದ್ಯ, ಶ್ರೀ ಮಹಾಗಣಪತಿ ಹೋಮ, ಪಂಚಾಮೃತ ಅಭಿಷೇಕ, ನಾಗದೇವರಿಗೆ ತಂಬಿಲ, ಆಶ್ಲೇಷ ಬಲಿ, ವಾಹನ ಪೂಜೆ, ತುಲಾಭಾರ ಸೇವೆ ಇನ್ನಿತರ ಸೇವೆಗಳು ನಡೆಯಲಿದ್ದು, ಭಕ್ತಾದಿಗಳು ಇದರ ಸದುಪಯೋಗಪಡಿಸಿಕೊಳ್ಳಬಹುದು.