Advertisement
ಸೆ. 2 ರಂದು ಶ್ರೀ ಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಆಯೋಜಿಸಲಾಗಿದ್ದ ಭಕ್ತಿಗೀತೆ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ಹರೀಶ್ ಶೆಟ್ಟಿ ಪಡುಬಿದ್ರೆ ಮತ್ತು ಸಂತೋಷ್ ಶೆಟ್ಟಿ ಅವರ ಮುತುವರ್ಜಿಯಿಂದ ಭಜನಾ ಸ್ಪರ್ಧೆ ಆಯೋಜಿಸಿದ್ದೇವೆ. ಅವರೀರ್ವರನ್ನೂ ನಾವು ಅಭಿನಂದಿಸುತ್ತಿದ್ದೇನೆ. ಎಲ್ಲ ಸ್ಪರ್ಧಿಗಳು ಉತ್ತಮವಾಗಿ ಹಾಡಿದ್ದಾರೆ. ತಾಯಿ ಮೂಕಾಂಬಿಕೆಯ ಅನುಗ್ರಹ ಸದಾ ಮಕ್ಕಳ ಮೇಲಿರಲಿ ಎಂದು ನುಡಿದರು.
Related Articles
Advertisement
ಜಗದೀಶ್ ಶೆಟ್ಟಿ ಅವರು ಮಾತನಾಡಿ, ನಮ್ಮ ದೇವಾಲಯ ಆರಂಭಗೊಂಡಂದಿನಿಂದ ನಮ್ಮ ಹಿಂದು ಸಂಸ್ಕೃತಿಯ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದೇವೆ. ಈ ವರ್ಷ ಪ್ರಥಮ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಭಕ್ತಿಗೀತೆಗಳ ಸ್ಪರ್ಧೆ ಆಯೋಜಿಸಿದ್ದೇವೆ. ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸಬೇಕು. ಅದಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಆದ್ದರಿಂದ ಪಾಲಕರು ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದು ನುಡಿದರು.
ಸುರೇಶ್ ಕೋಟ್ಯಾನ್ ಅವರು ಮಾತನಾಡಿ, ನಾವು ನಮ್ಮ ದೇವಾಲಯದಲ್ಲಿ ಹಿಂದೂ ಧರ್ಮದ ಪ್ರತಿಯೊಂದು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾ ಬಂದಿದ್ದೇವೆ. ಇಂದು ಮೊದಲ ಬಾಸಿಗೆ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪಾಲಕರು ಮಕ್ಕಳನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು. ಕಾರ್ಯಕ್ರಮವನ್ನು ಆಯೋಜಿಸಿದ ಎಲ್ಲರು ಅಭಿನಂದನಾರ್ಹರು ಎಂದರು.
ಭಕ್ತಿಗೀತೆ ಮತ್ತು ಶ್ರೀಕೃಷ್ಣ ವೇಷದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು. ಹರೀಶ್ ಶೆಟ್ಟಿ ಪಡುಬಿದ್ರೆ ಕಾರ್ಯಕ್ರಮ ನಿರ್ವಹಿಸಿ ವಿಜೇತರ ಯಾದಿಯನ್ನು ಘೋಷಿಸಿದರು. ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ ವಂದಿಸಿದರು. ಬೆಳಗ್ಗೆಯಿಂದ ಶ್ರೀಕ್ಷೇತ್ರದಲ್ಲಿ ವಿವಿಧ ಪೂಜೆ, ರಾತ್ರಿ ಮಂಡಳಿಯವರಿಂದ ಭಜನೆ, ಕುಣಿತ ಭಜನೆ, ರಾತ್ರಿ ಚಂದ್ರೋದಯಕ್ಕೆ ಶ್ರೀ ಕೃಷ್ಣ ದೇವರಿಗೆ ಅಘÂì ಅರ್ಪಣೆ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಆನಂತರ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ವತಿಯಿಂದ ಅನ್ನಪ್ರಸಾದ ವಿತರಣೆ ನಡೆಯಿತು.
ದೇವಾಲಯದ ಪ್ರಧಾನ ಅರ್ಚಕರಾದ ಗುರುಪ್ರಸಾದ್ ಭಟ್ ಅವರ ಪೌರೋಹಿತ್ಯದಲ್ಲಿ ದೇವತ ಕಾರ್ಯ ಜರಗಿತು. ದಿವಾಕರ್ ಶೆಟ್ಟಿ ಮತ್ತು ಬಳಗದವರು ಶ್ರೀ ಕೃಷ್ಣ ದೇವರ ಮಂಟಪವನ್ನು ಶೃಂಗರಿಸಿದರು. ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಯ ಸದಸ್ಯರು, ಮಹಿಳಾ ವಿಭಾಗದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.