Advertisement
ಸರ್ಕಾರದ ಮಟ್ಟದಲ್ಲಿ ಸಂತ್ರಸ್ತರಿಗೆ ಹಾಗೂ ಬೆಳೆಹಾನಿಯಾದ ರೆೈತರಿಗೆ ಎನ್‌ಡಿಆರ್ ಎಫ್ ಹಾಗೂ ಎಸ್‌ಡಿಆರ್‌ಎಫ್ ಅನ್ವಯ ಪರಿಹಾರ ಒದಗಿಸುವ ಸಲುವಾಗಿ ಹಾಗೂ ಪರಿಹಾರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸುವ ಸಲುವಾಗಿ ಆ. 6ರಂದು ನಗರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ರೆೈತರು, ಸಂತ್ರಸ್ತರು ಹಾಗೂ ಅಧಿ ಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.
Related Articles
Advertisement
ಕಾತರಕಿ-ಕಲಾದಗಿ ಸೇತುವೆಗೆ ಖುದ್ದು ಭೇಟಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾ ಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬಂದಾಗ ಪ್ರವಾಹ ಉಂಟಾಗುವುದಕ್ಕೆ ಕಾರಣವೇನು ಎಂಬುದನ್ನು ಅಧ್ಯಯನ ಮಾಡಿ ವರದಿ ನೀಡುವಂತೆ ನೀರಾವರಿ ಇಲಾಖೆ ಅ ಧಿಕಾರಿಗಳು ಹಾಗೂ ಕೆಬಿಜೆಎನ್‌ಎಲ್ ಅಧಿ ಕಾರಿಗಳಿಗೆ ಸೂಚನೆ ನೀಡಿರುವೆ. ಶೀಘ್ರ ನೀರಾವರಿ ಸಮಿತಿ ವರದಿ ಬರಲಿದ್ದು, ಆ ಬಳಿಕ ಪ್ರವಾಹ ತಡೆಗೆ ಯಾವ ರೀತಿ ಕ್ರಮ ಕೆೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕಾತರಕಿ-ನಿಂಗಾಪುರ ಬಳಿ ಬ್ಯಾರೇಜ್ ಅಗಲೀಕರಣ ಹಾಗೂ ಮುಧೋಳ-ಯಾದವಾಡ, ಚಿಂಚಖಂಡಿ ಸೇತುವೆ ಎತ್ತರಕ್ಕೆ ವರದಿ ಬಂದ ಬಳಿಕ ಕ್ರಮ ಕೆೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಘಟಪ್ರಭಾ ಪ್ರವಾಹದಿಂದ ಸಂತ್ರಸ್ತರಾದವರ ನೆರವಿಗೆ ನಮ್ಮ ಸರ್ಕಾರ ಸದಾ ಸಿದ್ದವಿದೆ. ರೆೈತರು ಹಾಗೂ ನೆರೆ ಸಂತ್ರಸ್ತರು ಎದೆಗುಂದದೆ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ನಾಳೆ (ಆ. 12ರಂದು) ಮುಧೋಳ ಬಂದ್
ಮುಧೋಳ : ಘಟಪ್ರಭಾ ನದಿಯ ಪ್ರವಾಹದಲ್ಲಿ ಮುಳುಗಡೆಯಾಗಿರುವ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಜೋರಾಗತೊಡಗಿದ್ದು, ಸರ್ಕಾರ ಹೋರಾಟಗಾರರ ಕೂಗಿಗೆ ಸ್ಪಂದಿಸುತ್ತಿಲ್ಲ ಎಂದು ಸೋಮವಾರ (ಆ. 12) ಮುಧೋಳ ಬಂದ್ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಪ್ರವಾಹಕ್ಕೊಳಗಾದ 30 ಗ್ರಾಮಗಳ ಸಂತ್ರಸ್ತರು, ರೆೈತರು ಒಮ್ಮತದ ನಿರ್ಧಾರ ಪ್ರಕಟಿಸಿದರು.
ನಗರದಲ್ಲಿ ಪ್ರವಾಹ ಸಂತ್ರಸ್ತರು ಹಾಗೂ ರೆೈತರ ಸಭೆಯಲ್ಲಿ ನಿರ್ಧಾರ ವ್ಯಕ್ತಪಡಿಸಿದ ಅವರು, ಆ.7ರಂದು ಸುರಿಯುವ ಮಳೆಯಲ್ಲಿಯೇ ನೆನೆದು ಹೋರಾಟ ಮಾಡಿದರೂ ಜನಪ್ರತಿನಿ ಧಿಗಳಾಗಲಿ, ಜಿಲ್ಲಾಡಳಿತವಾಗಲಿ ನಮ್ಮ ಹೋರಾಟಕ್ಕೆ ಸ್ಪಂದಿಸುವ ಕಾರ್ಯ ಮಾಡಿಲ್ಲ. ಅದಾದ ಬಳಿಕ ಅ.10ರವೆಗೆ ನಾವು ಸರ್ಕಾರಕ್ಕೆ ಗಡುವು ನೀಡಿದ್ದೆವು. ಆದರೆ ಸರ್ಕಾರ ನಮ್ಮ ಸಮಸ್ಯೆಗೆ ಧ್ವನಿಯಾಗುತ್ತಿಲ್ಲ. ಅದಕ್ಕಾಗಿ ಉಗ್ರ ಹೋರಾಟ ಅನಿವಾರ್ಯವಾಗಿದೆ.
ಸರ್ಕಾರ ಮುಂದಿನ ಅನಾಹುತಕ್ಕೆ ಎಡೆಮಾಡಿಕೊಡದೆ ನಮ್ಮ ಬೇಡಿಕೆಗೆ ಸ್ಪಂದಿಸಿ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ದುಂಡಪ್ಪ ಯರಗಟ್ಟಿ, ಬಸವಂತ ಕಾಂಬಳೆ, ಮುತ್ತಪ್ಪ ಕೊಮಾರ, ಸುಭಾಸ ಶಿರಬೂರ, ಬಂಡು ಘಾಟಗೆ, ಸದಪ್ಪ ತೇಲಿ, ಮಹೇಶಗೌಡ ಪಾಟೀಲ, ಸುಗರಪ್ಪ ಅಕ್ಕಿಮರಡಿ, ತಿಮ್ಮಣ್ಣ ಬಟಕುರ್ಕಿ, ಸದಾಶಿವ ಇಟಗನ್ನವರ ಸೇರಿದಂತೆ ಇತರರು ಇದ್ದರು.