Advertisement

Ghat ನಿರ್ಬಂಧ: ಜಿಲ್ಲಾಡಳಿತಗಳ ಸಮನ್ವಯತೆಗೆ ಖಾದರ್‌ ಸೂಚನೆ

11:19 PM Jul 21, 2024 | Team Udayavani |

ಮಂಗಳೂರು: ಮಂಗಳೂರು- ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಮಾರ್ಗಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟಿಗಳನ್ನು ಬಂದ್‌ ಮಾಡುವಾಗ ಆಯಾ ಜಿಲ್ಲಾಡಳಿತಗಳು ಹೊಂದಾಣಿಕೆಯೊಂದಿಗೆ ತೀರ್ಮಾನ ಕೈಗೊಳ್ಳಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಲೋಕೋಪ ಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್‌. ಸೆಲ್ವಕುಮಾರ್‌ ಅವರಿಗೆ ಸೂಚನೆ ನೀಡಿದ್ದಾರೆ.

Advertisement

ಮಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾ ಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿ ಪೂರ್ವ ಸಿದ್ಧತೆಯೊಂದಿಗೆ ಘಾಟಿ ಬಂದ್‌ ಬಗ್ಗೆ ಚಿಂತಿಸಬೇಕು. ಒಂದೊಂದು ಜಿಲ್ಲೆ ತೀರ್ಮಾನ ತೆಗೆದುಕೊಂಡರೆ ಜನರಿಗೆ ಸಮಸ್ಯೆಯಾಗು ತ್ತದೆ.

ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆ ತನಕ ರಸ್ತೆ ನಿರ್ಬಂಧ ಮಾಡಬೇಕು. ಲೋಕೋಪಯೋಗಿ ಇಲಾಖೆ ರಸ್ತೆ ಸುರಕ್ಷೆಗೆ ಪ್ರಾಮುಖ್ಯ ಕೊಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ದಿನನಿತ್ಯ ಸಹಸ್ರಾರು ಮಂದಿಯ ವಾಹನಗಳು, ಟ್ರಕ್‌ಗಳೂ ಸಂಚರಿಸು ತ್ತವೆ. ಆದರೆ ಈ ಮೂರೂ ಘಾಟಿ ರಸ್ತೆಗಳನ್ನು ಮುಚ್ಚಿದರೆ ಜನರಿಗೆ ಕಷ್ಟ. ವಿಮಾನ ಯಾನ ಜನಸಾಮಾನ್ಯರ ಕೈಗೆಟುಕದು. ರೈಲು ಸಂಚಾರ ತುರ್ತು ಸಂದರ್ಭಗಳಿಗೆ ಅನುಗುಣವಾಗಿಲ್ಲ. ಈ ನಿಟ್ಟಿನಲ್ಲಿ ರಸ್ತೆ ಸಂಚಾರ ಅನಿವಾರ್ಯ. ಮಡಿಕೇರಿ ಘಾಟಿಯಲ್ಲಿ ಮೊನ್ನೆ ಆದಂತಹ ಸಮಸ್ಯೆ ಮರುಕಳಿಸದಂತೆ ವ್ಯವಸ್ಥೆ ಮಾಡಬೇಕಾದುದು ನಾಲ್ಕೂ ಜಿಲ್ಲಾ ಧಿಕಾರಿಗಳ ಹಾಗೂ ಲೋಕೋಪಯೋಗಿ ಇಲಾಖೆಯ ಕರ್ತವ್ಯವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next