ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಅಂಗವಾಗಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ನಡೆದವು.
ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ನಾಗಾರಾಧನೆಗೆ ಪ್ರಸಿದ್ಧವಾಗಿರುವ ಘಾಟಿ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಅಂಗವಾಗಿ ಬೆಳಗ್ಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ನಡೆಯಿತು.
ಸುಬ್ರಹ್ಮಣ್ಯಸ್ವಾಮಿಯ ಪ್ರಾಕಾರೋತ್ಸವ ನಡೆಯಿತು. ಭಕ್ತಾದಿ ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿದರು. ಸಹಸ್ರಾರು ಭಕ್ತಾದಿ ಸಾಲುಗಟ್ಟಿ ನಿಂತು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದರು. ಸಾಮಾನ್ಯವಾಗಿ ಚಂಪಾ ಷಷ್ಠಿ ಅಥವಾ ಸ್ಕಂದ ಷಷ್ಠಿಯಂದು ಎಲ್ಲಿ ಸುಬ್ರಹ್ಮಣ್ಯ ದೇಗುಲವಿದೆಯೋ ಅಲ್ಲೆಲ್ಲಾ ವಿಶೇಷ ಪೂಜೆ ನಡೆಯುತ್ತವೆ. ಚಂಪಾ ಷಷ್ಠಿಯಂದು ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬ್ರಹ್ಮರ ಥೋತ್ಸವ ಜರುಗುತ್ತದೆ. ಅಶ್ವತ್ಥಕಟ್ಟೆಯಲ್ಲಿ ಸರ್ಪಾಕಾರದ ವಿಗ್ರಹವನ್ನಿಟ್ಟು ಸುಬ್ರಹ್ಮಣ್ಯ ಸ್ವಾಮಿಯನ್ನು ಆವಾಹನೆ ಮಾಡಿ ಹಾಲೆರೆದು ಅಭಿಷೇಕ ಮಾಡಿ ನೇವೇದ್ಯ ಅರ್ಪಿಸಿ ಅಂದು ಉಪವಾಸ ವೃತವನ್ನು ಆಚರಿಸುವ ಪದ್ಧತಿಯಿದೆ.
ಡಿ.28ರಂದು ಬ್ರಹ್ಮರಥೋತ್ಸವ: ಕುಕ್ಕೆಗೆ ತೆರಳಲು ಸಾಧ್ಯವಾಗದ ಭಕ್ತಾದಿಗಳು ಘಾಟಿ ಕ್ಷೇತ್ರದಲ್ಲಿಯೇ ನಾಗಾರಾ ಧನೆ ಮಾಡಿ ತಮ್ಮ ಇಷ್ಟಾರ್ಥ ನೆರವೇರಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆಯುತ್ತಾರೆ. ಈ ಬಾರಿ ಡಿ.28 ರಂದು ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ನಡೆಯ ಲಿದೆ. ಡಿ.19ರಿಂದ ದನಗಳ ಜಾತ್ರೆ ಆರಂಭವಾಗಲಿದೆ.
ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ಧೂರಿ ಯಾಗಿ ನೆರವೇರಿತು.
ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋ ತ್ಸವದ ರಥವನ್ನು ದೊಡ್ಡಬಳ್ಳಾಪುರ ತಾಲೂಕಿನ ಕಸುವನಹಳ್ಳಿ ಗ್ರಾಮದ ಅಂಬರೀಶ್ ನೇತೃತ್ವದ ಯುವಕರ ತಂಡವು ಹೂಗಳಿಂದ ಸಿಂಗರಿಸಿದ್ದು ವಿಶೇಷ ವಾಗಿತ್ತು. ಕಳೆದ ಎರಡು ವರ್ಷಗಳಿಂದ ಕಸುವನ ಹಳ್ಳಿಯ ಅಂಬರೀಶ್ ನೇತೃತ್ವದ ಯುವಕರು ಬ್ರಹ್ಮರ ಥೋತ್ಸವಕ್ಕೆ ಹೂವಿನ ಅಲಂಕಾರ ಮಾಡುತ್ತಿದ್ದಾರೆ. ಈ ತಂಡದಲ್ಲಿ ನಾರಾಯಣಸ್ವಾಮಿ, ಸಿದ್ದಲಿಂಗರಾಜು ಮತ್ತು ಯುವ ಮುಖಂಡ ಅಜಯ್‌ಕುಮಾರ್ ಮತ್ತು ನಾಗೇಶ್ ಮತ್ತು ಪವನ್ ಕುಮಾರ್ ಇದ್ದರು.